ಟಿ20 ವಿಶ್ವಕಪ್: ಭಾರತ-ಪಾಕ್ ಪಂದ್ಯದ ಮೇಲೆ ಮಳೆ ಕಾರ್ಮೋಡ; ನಡೆಯೋದೇ ಡೌಟ್!

ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಗೆ ಮಳೆ ಭೀತಿ ಎದುರಾಗಿದ್ದು, ಹೈವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಹಲವು ಪಂದ್ಯಗಳಿಗೆ ಮಳೆ ಅಡ್ಡಿ ಮಾಡುವ ಆತಂಕ ಎದುರಾಗಿದೆ.
ಟಿ20 ವಿಶ್ವಕಪ್ ಟೂರ್ನಿಗೆ ಮಳೆ ಕಾಟ
ಟಿ20 ವಿಶ್ವಕಪ್ ಟೂರ್ನಿಗೆ ಮಳೆ ಕಾಟ

ಸಿಡ್ನಿ: ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಗೆ ಮಳೆ ಭೀತಿ ಎದುರಾಗಿದ್ದು, ಹೈವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಹಲವು ಪಂದ್ಯಗಳಿಗೆ ಮಳೆ ಅಡ್ಡಿ ಮಾಡುವ ಆತಂಕ ಎದುರಾಗಿದೆ.

ಟೂರ್ನಿಯ ಈ ವಾರದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹೀಗಾಗಿ ಶುಕ್ರವಾರ, ಶನಿವಾರ ಮತ್ತು ಭಾನುವಾರದ ಪಂದ್ಯಗಳು ಮಳೆಯಿಂದಾಗಿ ತೊಂದರೆಗೀಡಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ.

ಪ್ರಮುಖವಾಗಿ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರು ಪಂದ್ಯಗಳಿಗೆ ಮಳೆ ಅಡ್ಡಿಯಾಗಲಿದೆ ಎಂದು ಹೇಳಲಾಗಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರದ ಭಾರತ-ಪಾಕಿಸ್ತಾನ T20 ವಿಶ್ವಕಪ್ ಪಂದ್ಯದ ಹವಾಮಾನ ಮುನ್ಸೂಚನೆಯು ಉತ್ತೇಜಕವಾಗಿಲ್ಲ, ಅಂದು ಮೆಲ್ಬೋರ್ನ್‌ನಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ ಎನ್ನಲಾಗಿದೆ. ಆಸ್ಟ್ರೇಲಿಯಾ ಸರ್ಕಾರದ ಹವಾಮಾನ ಇಲಾಖೆ ಮೆಲ್ಬೋರ್ನ್‌ನಲ್ಲಿ ಶುಕ್ರವಾರದಿಂದ ಭಾನುವಾರದವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ, ಭಾನುವಾರದಂದು ಶೇ.80% ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಇದು ಭಾರತ-ಪಾಕ್ ತಂಡದ ನಡುವಿನ ಪಂದ್ಯದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಶನಿವಾರ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆತಿಥೇಯ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್‌ನ ಆರಂಭಿಕ ಪಂದ್ಯಕ್ಕೂ ಮಳೆ ಅಡ್ಡಿಪಡಿಸಬಹುದು ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com