ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣ? ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೊಟ್ಟ ಉತ್ತರ ಇಲ್ಲಿದೆ...

ಅನಿಯಂತ್ರಿತ ವಿಚಾರಗಳ ಬಗ್ಗೆ ಯೋಚಿಸುತ್ತಾ ತಮ್ಮ ನಿದ್ರೆಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಮತ್ತು ಮುಂದಿನ ವರ್ಷ ಏಷ್ಯಾ ಕಪ್‌ಗಾಗಿ ತಮ್ಮ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವ ಕುರಿತು ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಮೆಲ್ಬೋರ್ನ್: ಅನಿಯಂತ್ರಿತ ವಿಚಾರಗಳ ಬಗ್ಗೆ ಯೋಚಿಸುತ್ತಾ ತಮ್ಮ ನಿದ್ರೆಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಮತ್ತು ಮುಂದಿನ ವರ್ಷ ಏಷ್ಯಾ ಕಪ್‌ಗಾಗಿ ತಮ್ಮ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವ ಕುರಿತು ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಪಾಕಿಸ್ತಾನದ ವಿರುದ್ಧದ ತಮ್ಮ ತಂಡದ ಟಿ20 ವಿಶ್ವಕಪ್ ಆರಂಭಿಕ ಪಂದ್ಯದ ಮುನ್ನಾದಿನ ವಿವಾದದ ಕುರಿತು ಕೇಳಲಾದ ಪ್ರಶ್ನೆಗೆ ರೋಹಿತ್ ಶರ್ಮಾ ಈ ರೀತಿ ಉತ್ತರಿಸಿದರು.

'ನಾವೀಗ ವಿಶ್ವಕಪ್‌ನತ್ತ ಗಮನ ಹರಿಸೋಣ. ಏಕೆಂದರೆ, ಇದು ನಮಗೆ ಮುಖ್ಯವಾಗಿದೆ. ಮುಂದೆ ಏನಾಗಬಹುದು ಎಂಬ ಚಿಂತೆ ನಮಗಿಲ್ಲ. ಅದರ ಬಗ್ಗೆ ಯೋಚಿಸುವುದರಲ್ಲಿ ಅರ್ಥವಿಲ್ಲ. ಬಿಸಿಸಿಐ ಈ ವಿಚಾರದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ನಾಳೆಯ ಆಟಕ್ಕೆ ನಾವು ಹೇಗೆ ಚೆನ್ನಾಗಿ ಸಿದ್ಧರಾಗಬೇಕು ಎಂಬುದರ ಮೇಲೆ ನಾವು ಗಮನಹರಿಸುತ್ತಿದ್ದೇವೆ' ಎಂದು ರೋಹಿತ್ ಉತ್ತರಿಸಿದರು.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, 'ಭಾರತವು ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಮತ್ತು ಅದು ತಟಸ್ಥ ಸ್ಥಳದಲ್ಲಿ ನಡೆಯಲಿದೆ' ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ ನಂತರ ಭಾರತ ಮತ್ತು ಪಾಕಿಸ್ತಾನಿ ಕ್ರಿಕೆಟ್ ಮಂಡಳಿಗಳ ನಡುವೆ ಮಾತಿನ ಚಕಮಕಿ ಪ್ರಾರಂಭವಾಯಿತು.

ಇದಕ್ಕೆ ಪ್ರತ್ಯುತ್ತರವಾಗಿ, ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಹೇಳಿದೆ.

ಆಟಗಾರರ ಭದ್ರತೆ ಪ್ರಮುಖ ವಿಷಯವಾಗಿರುವುದರಿಂದ ಮುಂದಿನ ವರ್ಷ ನಡೆಯಲಿರುವ ಏಷ್ಯಾಕಪ್‌ಗಾಗಿ ಭಾರತದ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಲಿದೆ. ಮುಂದಿನ ವರ್ಷ 50 ಓವರ್‌ಗಳ ವಿಶ್ವಕಪ್‌ನಲ್ಲಿ ಸ್ಪರ್ಧಿಸಲು ಪಾಕಿಸ್ತಾನ ಭಾರತಕ್ಕೆ ಬರುವ ನಿರೀಕ್ಷೆ ಇದೆ, 'ಎಲ್ಲರಿಗೂ ಸ್ವಾಗತ' ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com