ಟಿ20 ವಿಶ್ವಕಪ್: ಪಾಕಿಸ್ತಾನದ ಮಹಮದ್ ರಿಜ್ವಾನ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಸೂರ್ಯ ಕುಮಾರ್ ಯಾದವ್!
ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ.
Published: 28th October 2022 06:20 PM | Last Updated: 28th October 2022 07:30 PM | A+A A-

ಸೂರ್ಯ ಕುಮಾರ್ ಯಾದವ್
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ.
ನೆದರ್‌ಲ್ಯಾಂಡ್ ವಿರುದ್ಧ ಸ್ಫೋಟಕ ಅರ್ಧಶತಕ ಗಳಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪಾಕಿಸ್ತಾನದ ಓಪನರ್ ಮೊಹಮ್ಮದ್ ರಿಜ್ವಾನ್ ದಾಖಲೆಯನ್ನು ಸರಿಗಟ್ಟಿದ್ದು, ಈ ವರ್ಷದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿಹೆಚ್ಚು ರನ್‌ಗಳಿದ ಮೊದಲ ಆಟಗಾರ ಎನ್ನಿಸಿಕೊಂಡಿದ್ದಾರೆ.
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ T20 ಸರಣಿಯಲ್ಲೂ ಅಬ್ಬರಿಸಿದ ಸೂರ್ಯಕುಮಾರ್ ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ 780 ರೇಟಿಂಗ್ಸ್ ಗಳಿಸುವ ಮೂಲಕ 3ನೇ ಸ್ಥಾನಕ್ಕೇರಿದ್ದರು. ಅಲ್ಲದೇ 573 ಎಸೆತಗಳಲ್ಲಿ ವೇಗದ 1 ಸಾವಿರ ರನ್ ಪೂರೈಸಿದ ಖ್ಯಾತಿಗೆ ಪಾತ್ರರಾಗಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ನೆದರಲ್ಯಾಂಡ್ ವಿರುದ್ಧ ಸ್ಪೋಟಕ ಅರ್ಧ ಶತಕ (25 ಎಸೆತಗಳಲ್ಲಿ 50 ರನ್) ಸಿಡಿಸುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್‌ನನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.
ಇದನ್ನೂ ಓದಿ: ಟಿ20 ವಿಶ್ವಕಪ್: ಮಳೆಗೆ ಇಂಗ್ಲೆಂಡ್ vs ಆಸ್ಚ್ರೇಲಿಯಾ ಹೈವೋಲ್ಟೇಜ್ ಪಂದ್ಯ ರದ್ದು!
ಪ್ರಸ್ತುತ ವರ್ಷದಲ್ಲಿ 19 ಇನ್ನಿಂಗ್ಸ್‌ಗಳನ್ನಾಡಿರುವ ಮೊಹಮ್ಮದ್ ರಿಜ್ವಾನ್ 124 ಸ್ಟ್ರೈಕ್‌ರೇಟ್ ನಲ್ಲಿ 662 ಎಸೆತಗಳಲ್ಲಿ 825 ರನ್‌ಗಳಿಸಿ ಈ ವರ್ಷದ ಟಿ20 ನಲ್ಲಿ ಅತಿಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. ಆದರೆ ಸತತ ಬ್ಯಾಟಿಂಗ್ ಲಯ ಕಂಡುಕೊಂಡಿರುವ ಸೂರ್ಯಕುಮಾರ್ 25 ಇನ್ನಿಂಗ್ಸ್‌ಗಳನ್ನು ಎದುರಿಸಿದರೂ 184.86 ಸ್ಟ್ರೈಕ್‌ರೇಟ್‌ನಲ್ಲಿ 469 ಎಸೆತಗಳಲ್ಲೇ 867 ರನ್ ಬಾರಿಸಿ ರಿಜ್ವಾನ್ ಅವರನ್ನು ಹಿಂದಿಕ್ಕಿದ್ದಾರೆ. ಅವರ ಈ ದಾಖಲೆಯಲ್ಲಿ 1 ಶತಕ, 7 ಅರ್ಧಶತಕ, 77 ಬೌಂಡರಿ ಹಾಗೂ 52 ಸಿಕ್ಸರ್‌ಗಳು ಸೇರಿವೆ.
ಇದನ್ನೂ ಓದಿ: ಟಿ20 ವಿಶ್ವಕಪ್: ವಿಶ್ವದಾಖಲೆ ಹೊಸ್ತಿಲಲ್ಲಿ ಭಾರತದ ರನ್ ಮೆಷಿನ್ ಕೊಹ್ಲಿ, ವಿರಾಟ್ ಗೆ ಬೇಕು ಕೇವಲ 27 ರನ್!
ಇನ್ನು ಗುರುವಾರ ನೆದರ್‌ಲ್ಯಾಂಡ್ ವಿರುದ್ಧ ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. 180 ರನ್‌ಗಳ ಗುರಿ ಬೆನ್ನತ್ತಿದ್ದ ನೆದರ್ಲ್ಯಾಂಡ್ ಟೀಂ ಇಂಡಿಯಾದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್‌ಗಳಿಸಿ ಸೋಲೊಪ್ಪಿಕೊಂಡಿತು.