ಟಿ20 ವಿಶ್ವಕಪ್: ಪಾಕ್ ಗೆ ಮಾಡು ಇಲ್ಲವೇ ಮಡಿ ಪಂದ್ಯ: ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ!

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಿಂದ ಬಹುತೇಕ ಹೊರಬೀಳುವ ಅತಂಕದಲ್ಲಿರುವ ಪಾಕಿಸ್ತಾನ, ನೆದರ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯವನ್ನಾಡುತ್ತಿದೆ.
ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ

ಪರ್ತ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಿಂದ ಬಹುತೇಕ ಹೊರಬೀಳುವ ಅತಂಕದಲ್ಲಿರುವ ಪಾಕಿಸ್ತಾನ, ನೆದರ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯವನ್ನಾಡುತ್ತಿದೆ.

ಪರ್ತ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಮಹತ್ವವಾಗಿದೆ. ಎರಡೂ ತಂಡಗಳು ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿಲ್ಲ ಮತ್ತು ಪಾಯಿಂಟ್ ಪಟ್ಟಿಯಲ್ಲಿ ಅಂತಿಮ ಎರಡು ಸ್ಥಾನಗಳಲ್ಲಿ ಕುಳಿತಿವೆ. ತನ್ನ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿದ್ದ ಪಾಕಿಸ್ತಾನಕ್ಕೆ 2ನೇ ಪಂದ್ಯದಲ್ಲಿ ದುರ್ಬಲ ಜಿಂಬಾಬ್ವೆ ಶಾಕ್ ನೀಡಿತ್ತು. ಹೀಗಾಗಿ ಪಾಕಿಸ್ತಾನಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ತಂಡಗಳು ಇಂತಿವೆ:
ನೆದರ್ಲ್ಯಾಂಡ್: 

ಸ್ಟೀಫನ್ ಮೈಬರ್ಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್(ವಿಕೆಟ್ ಕೀಪರ್, ನಾಯಕ), ರೋಲೋಫ್ ವ್ಯಾನ್ ಡೆರ್ ಮೆರ್ವೆ, ಟಿಮ್ ಪ್ರಿಂಗಲ್, ಫ್ರೆಡ್ ಕ್ಲಾಸೆನ್, ಬ್ರಾಂಡನ್ ಗ್ಲೋವರ್, ಪಾಲ್ ವ್ಯಾನ್ ಮೀಕೆರೆನ್

ಪಾಕಿಸ್ತಾನ: 
ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಮ್(ನಾಯಕ), ಶಾನ್ ಮಸೂದ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com