ಐಸಿಸಿ ಟಿ20 ರ್ಯಾಂಕಿಂಗ್: 15ನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟಿ20 ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 15ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟಿ20 ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 15ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ 2022 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ಚೊಚ್ಚಲ ಟಿ20 ಶತಕ ಗಳಿಸಿದ ನಂತರ ಈ ಸಾಧನೆ ಮಾಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಫಾರ್ಮ್‌ನಲ್ಲಿ ಕುಸಿತ ಕಂಡ ನಂತರ ವಿರಾಟ್ ಕೊಹ್ಲಿ 29ನೇ ಸ್ಥಾನಕ್ಕೆ ಕುಸಿದಿದ್ದರು. ಆದಾಗ್ಯೂ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ನಂತರ ಏಷ್ಯಾ ಕಪ್‌ನಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗರಾಗಿದ್ದಾರೆ.

ಐಸಿಸಿ ಟಿ20 ರ‍್ಯಾಂಕಿಂಗ್‌ನ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಆರು ಬ್ಯಾಟರ್‌ಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 810 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಏಯ್ಡನ್ ಮಾರ್ಕ್‌ರಮ್, ಬಾಬರ್ ಅಜಂ, ಸೂರ್ಯಕುಮಾರ್ ಯಾದವ್, ಡೇವಿಡ್ ಮಲಾನ್, ಆರೋನ್ ಫಿಂಚ್ ಟಾಪ್ 6 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 

ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ ಕೂಡ ಐಸಿಸಿ ಟಿ20 ಬೌಲರ್‌ಗಳ ಶ್ರೇಯಾಂಕದಲ್ಲಿ ಮೂರು ಸ್ಥಾನ ಮೇಲೇರಿ ಆರನೇ ಸ್ಥಾನಕ್ಕೆ ತಲುಪಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com