ಮೊದಲ ಟಿ20 ಪಂದ್ಯ: ಹಾರ್ದಿಕ್, ಕೆಎಲ್ ರಾಹುಲ್ ಅರ್ಧ ಶತಕ, ಆಸೀಸ್ ಗೆ ಗೆಲ್ಲಲು 209 ರನ್ ಗುರಿ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಪೇರಿಸಿದೆ.
Published: 20th September 2022 09:24 PM | Last Updated: 20th September 2022 09:24 PM | A+A A-

ಹಾರ್ದಿಕ್ ಪಾಂಡ್ಯ
ಮೊಹಾಲಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಪೇರಿಸಿದೆ.
ಮೊಹಾಲಿಯನ್ನು ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರ ಕೆಎಲ್ ರಾಹುಲ್ 55 ರನ್ ಪೇರಿಸಿ ಅದ್ಭುತ ಬ್ಯಾಟಿಂಗ್ ಮಾಡಿದರು. ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 11 ರನ್ ಹಾಗೂ ವಿರಾಟ್ ಕೊಹ್ಲಿ 2 ರನ್ ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು.
ಆದರೆ ಟೀಂ ಇಂಡಿಯಾದ ಯುವ ಆಟಗಾರ ಸೂರ್ಯ ಕುಮಾರ್ ಯಾದವ್ 46 ಹಾಗೂ ಹಾರ್ದಿಕ್ ಪಾಂಡ್ಯ ಅಜೇಯ 71 ರನ್ ಬಾರಿಸಿ ತಂಡ ಬೃಹತ್ ಮೊತ್ತ ಕಲೆ ಹಾಕುವಲ್ಲಿ ಯಶಸ್ವಿಯಾದರು.
ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ನಾಥನ್ ಇಲ್ಲಿಸ್ 3, ಹೆಜಲ್ವುಡ್ 2 ಹಾಗೂ ಕ್ಯಾಮರೊನ್ ಗ್ರೀನ್ 1 ವಿಕೆಟ್ ಪಡೆದಿದ್ದಾರೆ.