ಆಸ್ಟ್ರೇಲಿಯಾ ವಿರುದ್ಧ ಗೆಲುವು: ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಚಕ ಜಯ ದಾಖಲಿಸುವ ಮೂಲಕ ಭಾರತ ತಂಡ ಪಾಕಿಸ್ತಾನದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.
ಪಾಕ್ ಹಿಂದಿಕ್ಕಿದ ಭಾರತ
ಪಾಕ್ ಹಿಂದಿಕ್ಕಿದ ಭಾರತ

ಹೈದರಾಬಾದ್‌: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರೋಚಕ ಜಯ ದಾಖಲಿಸುವ ಮೂಲಕ ಭಾರತ ತಂಡ ಪಾಕಿಸ್ತಾನದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

ಹೌದು.. ಪ್ರಬಲ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ T20I ಸರಣಿಯನ್ನು ಭಾರತ 2-1 ಅಂತರದಲ್ಲಿ ವಶಪಡಿಸಿಕೊಂಡಿದ್ದು, ಮೂರನೇ ಮತ್ತು ಅಂತಿಮ T20I ನಲ್ಲಿ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು. 

ಇದನ್ನೂ ಓದಿ: ವೈಟ್ ಬಾಲ್ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ ದೇಶದ 2ನೇ ಆಟಗಾರ ಕೊಹ್ಲಿ!
 
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ 187 ರನ್ ಬೆನ್ನಟ್ಟಿದ ವಿರಾಟ್ ಕೊಹ್ಲಿ ಅವರ ಅಮೋಘ 63 ರನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಬಿರುಸಿನ 69 ರನ್ಗಳ ನೆರವಿನಿಂದ ಟೀಮ್ ಇಂಡಿಯಾ ಗೆಲುವನ್ನು ಸಾಧಿಸಿತು. ಇದಲ್ಲದೇ, ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ಪ್ರಸಕ್ತ ಕ್ಯಾಲೆಂಡರ್ ವರ್ಷದಲ್ಲಿ ಸಿಕ್ಕ 21ನೇ ಗೆಲುವು ಇದಾಗಿದೆ. ಅಂತೆಯೇ ಈ ಗೆಲುವಿನ ಮೂಲಕ ಪ್ರಸಕ್ತ ವರ್ಷದಲ್ಲಿ  T20Iಯಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಅಂತೆಯೇ ಈ ಗೆಲುವಿನೊಂದಿಗೆ ಟೀಂ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಹಿಂದಿಕ್ಕಿದೆ. ಈ ಹಿಂದೆ 2021 ರಲ್ಲಿ ಪಾಕಿಸ್ತಾನ 20 T20I ಗೆಲುವಿನ ದಾಖಲೆಯನ್ನು ಹೊಂದಿತ್ತು, ಇದು ತಂಡವೊಂದರ ಇದುವರೆಗಿನ ಗರಿಷ್ಠ ಗೆಲುವಾಗಿತ್ತು. ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ 2022ರ 21ನೇ ಟಿ20 ಗೆಲುವನ್ನು ದಾಖಲಿಸಿದೆ.

ಟೀಂ ಇಂಡಿಯಾ ಮುಂದಿನ ಮೂರು ಪಂದ್ಯಗಳ T20I ಸರಣಿ ದಕ್ಷಿಣ ಆಫ್ರಿಕಾ ವಿರುದ್ಧ ಬುಧವಾರದಿಂದ ಆರಂಭವಾಗಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com