ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ: ಉಳಿಕೆ ಪಂದ್ಯಗಳಿಗೆ ಬೂಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಗೆ ಸ್ಥಾನ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡಿರುವ ಜಸ್ಪ್ರೀತ್ ಬೂಮ್ರಾ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಟೀಂ ಇಂಡಿಯಾ ಆಯ್ಕೆದಾರರ ಸಮಿತಿ ನೇಮಕ ಮಾಡಿದೆ.
ಮೊಹಮ್ಮದ್ ಸಿರಾಜ್
ಮೊಹಮ್ಮದ್ ಸಿರಾಜ್
Updated on

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡಿರುವ ಜಸ್ಪ್ರೀತ್ ಬೂಮ್ರಾ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಟೀಂ ಇಂಡಿಯಾ ಆಯ್ಕೆದಾರರ ಸಮಿತಿ ನೇಮಕ ಮಾಡಿದೆ.

ಬೂಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ಪ್ರಸ್ತುತ ಅವರು ಬಿಸಿಸಿಐ ವೈದ್ಯಕೀಯ ತಂಡದ ನಿಗಾವಣೆಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಗುವಾಹಟಿಯಲ್ಲಿ ಭಾನುವಾರ ಎರಡನೇ ಟಿ-20 ಹಾಗೂ ಇಂದೋರ್ ನಲ್ಲಿ ಮಂಗಳವಾರ ಮೂರನೇ ಟಿ-20 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 16 ರಿಂದ ಆರಂಭವಾಗಲಿರುವ ಟಿ-20 ವಿಶ್ವಕಪ್ ಟೂರ್ನಿಯಿಂದಲೂ ಜಸ್ಪ್ರೀತ್ ಬೂಮ್ರಾ ಹೊರಗೆ ಇರುವ ಸಾಧ್ಯತೆಯಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com