IPL 2023: ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಮುಂಬೈ ವಿರುದ್ಧದ ಭರ್ಜರಿ ಗೆಲುವಿನಿಂದಿಗೆ ಆರ್ ಸಿಬಿ ಶುಭಾರಂಭ!
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರ್ ಸಿಬಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ 7 ವಿಕೆಟ್ ನಷ್ಟಕ್ಕೆ 171 ರನ್ ಪೇರಿಸಿತ್ತು. ತಿಲಕ್ ವರ್ಮಾ ಅಜೇಯ 84 ರನ್ ಗಳ ಸ್ಫೋಟಕ ಆಟ ಮುಂಬೈ ತಂಡ ಸ್ಪರ್ಧಾತ್ಮಕ ಗುರಿ ಪೇರಿಸಲು ಸಾಧ್ಯವಾಯಿತು.
ಮುಂಬೈ ಇಂಡಿಯನ್ಸ್ ನೀಡಿದ 172 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಅದ್ಭುತ ಬ್ಯಾಟಿಂಗ್ ಮೂಲಕ 148 ಜೊತೆಯಾತ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ಯಿತು. ವಿರಾಟ್ ಕೊಹ್ಲಿ ಅಜೇಯ 82 ರನ್ ಪೇರಿಸಿದ್ದರೆ ಡುಪ್ಲೆಸಿಸ್ 73 ರನ್ ಪೇರಿಸಿ ಔಟಾದರು. ನಂತರ ಬಂದ ಗ್ಲೇನ್ ಮ್ಯಾಕ್ಸ್ ವೆಲ್ ಅಜೇಯ 12 ರನ್ ಸಿಡಿಸಿದ್ದಾರೆ.
ಆರ್ ಸಿಬಿ ತಂಡ ಇನ್ನು 22 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 171 ರನ್ ಪೇರಿಸಿ ಗೆಲುವಿನ ನಗೆ ಬೀರಿತು. ಈ ಗೆಲುವಿನ ಮೂಲಕ ಆರ್ ಸಿಬಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ