IPL 2023: ಧವನ್ ಸ್ಫೋಟಕ ಆಟ, ರಾಜಸ್ಥಾನ ವಿರುದ್ಧ ಪಂಜಾಬ್ ಗೆ 5 ರನ್‌ಗಳ ವಿರೋಚಿತ ಗೆಲುವು!

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 5 ರನ್‌ಗಳಿಂದ ಸೋಲಿಸಿದೆ.
ಪಂಜಾಬ್ ಕಿಂಗ್ಸ್
ಪಂಜಾಬ್ ಕಿಂಗ್ಸ್
Updated on: 

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ 2023ರ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 5 ರನ್‌ಗಳಿಂದ ಸೋಲಿಸಿದೆ. 

ಗುವಾಹಟಿಯ ಬರ್ಸಾಪರಾ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 197 ರನ್ ಗಳಿಸಿತು. 

ಪಂಜಾಬ್ ನೀಡಿದ 198 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 192 ರನ್ ಗಳಿಸಲಷ್ಟೇ ಶಕ್ತವಾಯಿತು. ಕೊನೆಯ 2 ಓವರ್‌ಗಳಲ್ಲಿ ರಾಜಸ್ಥಾನಕ್ಕೆ ಗೆಲ್ಲು 34 ರನ್‌ಗಳ ಅಗತ್ಯವಿತ್ತು.

ಅರ್ಷದೀಪ್ ಸಿಂಗ್ ಅವರ ಓವರ್‌ನಲ್ಲಿ 18 ರನ್ ಪೇರಿಸಲಾಯಿತು. ಇನ್ನು ಆಟಗಾರ ಧ್ರುವ್ ಜುರೆಲ್ ಕೊನೆಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ 15 ಎಸೆತಗಳಲ್ಲಿ 32 ರನ್ ಗಳಿಸಿದರು. ಶಿರ್ಮೊನ್ ಹೆಟ್ಮೆಯರ್ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಿ ರಾಜಸ್ಥಾನಕ್ಕೆ ಗೆಲುವು ತಂದುಕೊಡುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಸ್ಯಾಮ್ ಕರನ್ ಅದಕ್ಕೆ ಅವಕಾಶ ನೀಡಲಿಲ್ಲ.

ಇನ್ನು ಟೂರ್ನಿಯಲ್ಲಿ ಪಂಜಾಬ್ ತಂಡ ಸತತ ಎರಡನೇ ಗೆಲುವು ದಾಖಲಿಸಿದೆ. ಪಂಜಾಬ್ ಪರ ಶಿಖರ್ ಧವನ್ 56 ಎಸೆತಗಳಲ್ಲಿ 86 ರನ್ ಗಳಿಸಿ ಅಜೇಯರಾಗಿ ಉಳಿದರು. ಪ್ರಭಾಸಿಮ್ರಾನ್ ಸಿಂಗ್ 34 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 60 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com