

ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 55 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ನೀಡಿದ 208ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 55 ರನ್ ಗಳ ಹೀನಾಯ ಸೋಲು ಕಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 6 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಮುಂಬೈ ತಂಡ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ (Rohith Sharma) ವಿಕೆಟ್ ಕಳೆದುಕೊಂಡಿತು.
59 ರನ್‌ಗಳಿಸುವಷ್ಟರಲ್ಲಿ ಪ್ರಮುಖ 5 ವಿಕೆಟ್ ಕಳೆದುಕೊಂಡಿತ್ತು. ಕ್ಯಾಮರೂನ್ ಗ್ರೀನ್ 33 ರನ್(26 ಎಸೆತ, 3 ಸಿಕ್ಸರ್), ಸೂರ್ಯಕುಮಾರ್ ಯಾದವ್ 23 ರನ್ (12 ಎಸೆತ, 3 ಬೌಂಡರಿ,1 ಸಿಕ್ಸರ್), ನೆಹಾಲ್ ವಧೇರಾ 40 ರನ್ (21 ಎಸೆತ, 3 ಬೌಂಡರಿ, 3 ಸಿಕ್ಸರ್) ಸಿಡಿಸಿ ಸ್ವಲ್ಪ ಪ್ರತಿರೋಧ ತೋರಿದರು.
ನೂರ್ ಅಹ್ಮದ್ 3 , ರಶೀದ್ ಖಾನ್ ಮತ್ತು ಮೋಹಿತ್ ಶರ್ಮಾ ತಲಾ 2, ಹಾರ್ದಿಕ್ ಪಾಂಡ್ಯ 1 ವಿಕೆಟ್ ಪಡೆದರು.