2024ರ ಟಿ20 ವಿಶ್ವಕಪ್​ವರೆ​ಗೂ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕನಾಗಿ ಮುಂದುವರಿಯಲಿ: ಗಂಗೂಲಿ

ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅವರು 2024ರಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ರವರೆಗೆ ನಾಯಕರಾಗಿ ಮುಂದುವರಿಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ...
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಕೋಲ್ಕತಾ: ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅವರು 2024ರಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ರವರೆಗೆ ನಾಯಕರಾಗಿ ಮುಂದುವರಿಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ಹೇಳಿದ್ದಾರೆ.

ಇತ್ತೀಚಿಗಷ್ಟೇ ತವರಿನಲ್ಲಿ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸತತ 10 ಗೆಲುವು ದಾಖಲಿಸಿತ್ತು. ಆದರೆ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು. ಆದರೂ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಿದ ರೀತಿಯಿಂದ ಪ್ರಭಾವಿತರಾಗಿರುವ ಸೌರವ್ ಗಂಗೂಲಿ ಅವರು, ರೋಹಿತ್ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಾರೆ. ಎಲ್ಲ ಮಾದರಿಯಲ್ಲೂ ತಂಡಕ್ಕೆ ಹಿಂತಿರುಗಿದ ಬಳಿಕ ಅವರೇ ತಂಡವನ್ನು ಮುನ್ನಡೆಸಬೇಕು ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ 2024 ರಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ವರೆಗೆ ಟೀಂ ಇಂಡಿಯಾವನ್ನು ನಾಯಕರಾಗಿ ಮುನ್ನಡೆಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಭಾರತ ತಂಡದ ಮಾಜಿ ನಾಯಕ ಹೇಳಿದ್ದಾರೆ.

ಇದೇ ವೇಳೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಒಪ್ಪಂದ ವಿಸ್ತರಣೆಯ ಬಗ್ಗೆ ಮಾತನಾಡಿದ ಗಂಗೂಲಿ, ‘ಬಿಸಿಸಿಐ ರಾಹುಲ್ ದ್ರಾವಿಡ್ ಮೇಲೆ ವಿಶ್ವಾಸ ತೋರಿಸಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿಲ್ಲ. ಆದರೆ ರಾಹುಲ್ ಅವರು ಮತ್ತೆ ಮುಖ್ಯ ಕೋಚ್ ಆಗಲು ಒಪ್ಪುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಸದಾ ನನ್ನನ್ನು ಕಾಡುತ್ತಿತ್ತು’ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com