ಕೊಹ್ಲಿ, ಗಪ್ಟಿಲ್ ದಾಖಲೆ ಮುರಿದು ಐತಿಹಾಸಿಕ ಸಾಧನೆ ಮಾಡಿದ ರುತುರಾಜ್ ಗಾಯಕ್ವಾಡ್

ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿರೋಚಿತ ಗೆಲುವು ಸಾಧಿಸಿದ್ದು, ಇದೇ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಋತುರಾಜ್ ಗಾಯಕ್ವಾಡ್
ಋತುರಾಜ್ ಗಾಯಕ್ವಾಡ್

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿರೋಚಿತ ಗೆಲುವು ಸಾಧಿಸಿದ್ದು, ಇದೇ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಹೌದು.. ಟೀಮ್ ಇಂಡಿಯಾದ ಯಂಗ್ ಓಪನಿಂಗ್ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20-ಐ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 5ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್ 12 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು. ಈ ಮೂಲಕ ಆಸ್ಚ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಒಟ್ಟು 223 ರನ್ ಗಳಿಸಿದರು.

ಆ ಮೂಲಕ ಕಾಂಗರೂ ಪಡೆ ವಿರುದ್ಧ ದ್ವಿಪಕ್ಷೀಯ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಅಲ್ಲದೆ ಋತುರಾಜ್ ಗಾಯಕ್ವಾಡ್ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ಮಾರ್ಟಿನ್ ಗಪ್ಟಿಲ್ ಅವರ ದಾಖಲೆ ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20-ಐ ಸರಣಿಯ ಆರಂಭಿಕ ಪಂದ್ಯದಲ್ಲೇ ಡೈಮಂಡ್ ಡಕ್ ಔಟ್ ಆಗಿದ್ದ ಋತುರಾಜ್ ಗಾಯಕ್ವಾಡ್, ದ್ವಿತೀಯ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ(58 ರನ್), ಮೂರನೇ ಪಂದ್ಯದಲ್ಲಿ ಚೊಚ್ಚಲ ಶತಕ (123* ರನ್) ಸಿಡಿಸಿದ್ದರು. ರಾಯ್ಪುರದಲ್ಲಿ ನಡೆದ 4ನೇ ಪಂದ್ಯದಲ್ಲಿ 32 ರನ್ ಗಳಿಸಿದ್ದ ಗಾಯಕ್ವಾಡ್ ತಂಡದ ಗೆಲುವಿಗೆ ಬಲತುಂಬಿದ್ದರು. ಆದರೆ 5ನೇ ಪಂದ್ಯದಲ್ಲಿ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಸರಣಿಯಲ್ಲಿ 223 ರನ್ ಬಾರಿಸಿ ವಿರಾಟ್ ಕೊಹ್ಲಿ ಹಾಗೂ ಮಾರ್ಟಿನ್ ಗುಪ್ಟಿಲ್ ಹೆಸರಿನಲ್ಲಿದ್ದ ದಾಖಲೆ ಮುರಿದು ಗಮನ ಸೆಳೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20-ಐ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿ
* 223 ರನ್ - ಋತುರಾಜ್ ಗಾಯಕ್ವಾಡ್, ಭಾರತ
* 218 ರನ್ - ಮಾರ್ಟಿನ್ ಗುಪ್ಟಿಲ್, ನ್ಯೂಜಿಲೆಂಡ್
* 199 ರನ್ - ವಿರಾಟ್ ಕೊಹ್ಲಿ, ಭಾರತ
* 192 ರನ್ - ಡೆವೋನ್ ಕಾನ್ವೇ, ನ್ಯೂಜಿಲೆಂಡ್

ಟಿ20-ಐ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ರನ್
ಟಿ20-ಐ ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದ 3ನೇ ಬ್ಯಾಟರ್ ಎಂಬ ದಾಖಲೆಗೂ ಋತುರಾಜ್ ಗಾಯಕ್ವಾಡ್ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ 231 ರನ್ ಗಳಿಸಿ ಟಾಪ್ 1 ಸ್ಥಾನದಲ್ಲಿದ್ದರೆ, ಕನ್ನಡಿಗ ಕೆ.ಎಲ್.ರಾಹುಲ್ 224 ರನ್ ಗಳೊಂದಿಗೆ ನಂತರದ ಸ್ಥಾನದಲ್ಲಿ ನಿಂತಿದ್ದಾರೆ.

* 231 ರನ್ - ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧ
* 224 ರನ್ - ಕೆ.ಎಲ್.ರಾಹುಲ್, ನ್ಯೂಜಿಲೆಂಡ್ ವಿರುದ್ಧ
* 223 ರನ್ - ಋತುರಾಜ್ ಗಾಯಕ್ವಾಡ್, ಆಸ್ಟ್ರೇಲಿಯಾ ವಿರುದ್ಧ
* 206 ರನ್ - ಇಶಾನ್ ಕಿಶನ್, ವೆಸ್ಟ್ ಇಂಡೀಸ್ ವಿರುದ್ಧ
* 204 ರನ್ - ಶ್ರೇಯಸ್ ಅಯ್ಯರ್, ಶ್ರೀಲಂಕಾ ವಿರುದ್ಧ

 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com