IND vs SA: ಭಾರೀ ಮಳೆ, ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ T20 ಪಂದ್ಯ ರದ್ದು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದು ಮಳೆಯಿಂದಾಗಿ ಟಾಸ್ ತಡವಾಗುತ್ತಿದೆ.
ಮಳೆಯಿಂದಾಗಿ ಪಂದ್ಯ ರದ್ದು
ಮಳೆಯಿಂದಾಗಿ ಪಂದ್ಯ ರದ್ದು
Updated on: 

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದು ಮಳೆಯಿಂದಾಗಿ ಟಾಸ್ ತಡವಾಗುತ್ತಿದೆ.

ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದು ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾದ ನಾಯಕತ್ವ ಐಡೆನ್ ಮಾರ್ಕ್ರಾಮ್ ಕೈಯಲ್ಲಿದೆ. ಆದರೆ ಮಳೆ ಎಡಬಿಡದೆ ಸುರಿಯುತ್ತಿದ್ದರಿಂದ ಪಂದ್ಯವನ್ನು ರದ್ದು ಮಾಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿತ್ತು. 

ಎರಡನೇ ಟಿ20 ಪಂದ್ಯ ಡಿಸೆಂಬರ್ 12ರಂದು ಗ್ಕೆಬರ್ಹಾದಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com