ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಆರಂಭಿಕ ಆಘಾತ

ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಎದುರಿಸಿದೆ.
ಟಾಸ್ ಗೆದ್ದ ಭಾರತ
ಟಾಸ್ ಗೆದ್ದ ಭಾರತ

ಜೋಹಾನ್ಸ್ ಬರ್ಗ್: ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಎದುರಿಸಿದೆ.

ಜೋಹಾನ್ಸ್ ಬರ್ಗ್ ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದ ಮೂಲಕ ಭಾರತ ತಂಡದ ಉದಯೋನ್ಮುಖ ಆಟಗಾರ ಸಾಯಿ ಸುದರ್ಶನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದಾರೆ.

ತಂಡಗಳು ಇಂತಿವೆ:
ದಕ್ಷಿಣ ಆಫ್ರಿಕಾ: 

ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ತಬ್ರೈಜ್ ಶಮ್ಸಿ

ಭಾರತ:
ಕೆಎಲ್ ರಾಹುಲ್(ವಿಕೆಟ್ ಕೀಪರ್ ಮತ್ತು ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಕುಲದೀಪ್ ಯಾದವ್, ಮುಖೇಶ್ ಕುಮಾರ್

ಆರಂಭಿಕ ಆಘಾತ
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ದಕ್ಷಿಣ ಆಫ್ರಿಕಾ ಆರಂಭಿಕ ಆಘಾತ ಎದುರಿಸಿದ್ದು, 2ನೇ ಓವರ್ ನಲ್ಲಿ ಅರ್ಶ್ ದೀಪ್ ಸಿಂಗ್ ದಕ್ಷಿಣ ಆಫ್ರಿಕಾದ ರೀಜಾ ಹೆಂಡ್ರಿಕ್ಸ್ (0) ಮತ್ತು ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (0) ಔಟ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾಗೆ ಮರ್ಮಾಘಾತ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com