2ನೇ ಏಕದಿನ: ಭಾರತವನ್ನು 8 ವಿಕೆಟ್‌ಗಳಿಂದ ಮಣಿಸಿದ ದಕ್ಷಿಣ ಆಫ್ರಿಕಾ, ಸರಣಿ 1-1 ಸಮಬಲ!

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಆಫ್ರಿಕಾವನ್ನು ಸೋಲಿಸಿತ್ತು. ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ದಕ್ಷಿಣ ಆಫ್ರಿಕಾ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಕಳಪೆಯಾಗಿತ್ತು.
ದಕ್ಷಿಣ ಆಫ್ರಿಕಾ
ದಕ್ಷಿಣ ಆಫ್ರಿಕಾ

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಆಫ್ರಿಕಾವನ್ನು ಸೋಲಿಸಿತ್ತು. ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ದಕ್ಷಿಣ ಆಫ್ರಿಕಾ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಕಳಪೆಯಾಗಿತ್ತು.

ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 8 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿದೆ. ಆಫ್ರಿಕಾಕ್ಕೆ ಭಾರತ 212 ರನ್‌ಗಳ ಗುರಿ ನೀಡಿತ್ತು. ಆಫ್ರಿಕಾ 43ನೇ ಓವರ್‌ನಲ್ಲಿ ಕೇವಲ ಎರಡು ವಿಕೆಟ್ ಕಳೆದುಕೊಂಡು ಗುರಿ ಸಾಧಿಸಿತು. ಇದೀಗ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಮೊದಲ ಏಕದಿನ ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು.

ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಭಾರತದ ಆರಂಭಿಕ ಆಟಗಾರ ರಿತುರಾಜ್ ಗಾಯಕ್ವಾಡ್ ಕೇವಲ 4 ರನ್ ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಬಂದ ತಿಲಕ್ ವರ್ಮಾ ಕೂಡ 10 ರನ್ ಗಳಿಸಿ ಔಟಾದರು. ಇಂತಹ ಪರಿಸ್ಥಿತಿಯಲ್ಲಿ ಸಾಯಿ ಸುದರ್ಶನ್ ಮತ್ತು ನಾಯಕ ಕೆಎಲ್ ರಾಹುಲ್ ಇನ್ನಿಂಗ್ಸ್ ಜವಾಬ್ದಾರಿ ವಹಿಸಿಕೊಂಡು 68 ರನ್ ಜೊತೆಯಾಟ ನಡೆಸಿದರು.

ಸುದರ್ಶನ್ 83 ಎಸೆತಗಳಲ್ಲಿ 62 ರನ್ ಗಳಿಸಿದರು. ಕೆಎಲ್ ರಾಹುಲ್ 64 ಎಸೆತಗಳಲ್ಲಿ 56 ರನ್ ಗಳಿಸಿದರು. ಇವರಿಬ್ಬರೂ ಔಟಾದ ನಂತರ ಯಾವುದೇ ಬ್ಯಾಟ್ಸ್‌ಮನ್ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಸಂಜು ಸ್ಯಾಮ್ಸನ್ 12 ರನ್ ಮತ್ತು ರಿಂಕು ಸಿಂಗ್ 17 ರನ್ ಗಳಿಸಿದರು. ಕೆಳ ಕ್ರಮಾಂಕದಲ್ಲಿ ಅರ್ಷದೀಪ್ 17 ಎಸೆತಗಳಲ್ಲಿ 18 ರನ್ ಗಳಿಸಿ ಉಪಯುಕ್ತ ಕೊಡುಗೆ ನೀಡಿದರು. ಇಡೀ ತಂಡ 46.2 ಓವರ್‌ಗಳಲ್ಲಿ 211 ರನ್‌ಗಳಿಗೆ ಆಲೌಟಾಯಿತು. ಆಫ್ರಿಕಾ ಪರ ನಾಂದ್ರೆ ಬರ್ಗರ್ 3 ವಿಕೆಟ್ ಪಡೆದರು.

ಇದಕ್ಕೆ ಉತ್ತರವಾಗಿ ರೀಜಾ ಹೆಂಡ್ರಿಕ್ಸ್ ಮತ್ತು ಟೋನಿ ಡಿ ಜಾರ್ಜಿ ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 130 ರನ್ ಸೇರಿಸಿದರು. ರಿಜಾ 52 ರನ್ ಗಳಿಸಿ ಔಟಾದರು. ಇದಾದ ಬಳಿಕ ರಾಸ್ಸಿ ವ್ಯಾನ್ ಡೆರ್ ಡಸ್ಸೆ ಕೂಡ ಟೋನಿಗೆ ಬೆಂಬಲ ನೀಡಿ ತಂಡವನ್ನು 206 ರನ್‌ಗಳಿಗೆ ಕೊಂಡೊಯ್ದರು. ತಂಡದ ಗೆಲುವಿಗೆ ಕೇವಲ 6 ರನ್‌ಗಳ ಅಗತ್ಯವಿದ್ದಾಗ ರೆಸಿ ಔಟಾದರು. ಇಷ್ಟೊತ್ತಿಗೆ ಪಂದ್ಯದ ಫಲಿತಾಂಶ ನಿರ್ಧಾರವಾಗಿತ್ತು. ಆಫ್ರಿಕಾ 42.3 ಓವರ್‌ಗಳಲ್ಲಿ ಗುರಿ ತಲುಪಿತು. ಟೋನಿ 122 ಎಸೆತಗಳಲ್ಲಿ 119 ರನ್ ಗಳಿಸಿದರು. ಅವರು 9 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು. ಈ ಪಂದ್ಯದಲ್ಲಿ ಭಾರತ 8 ಬೌಲರ್‌ಗಳನ್ನು ಪ್ರಯತ್ನಿಸಿದೆ ಆದರೆ ಸಣ್ಣ ಮೊತ್ತವನ್ನು ರಕ್ಷಿಸಲು ಇವೆಲ್ಲವೂ ಸಾಕಾಗಲಿಲ್ಲ. ಭಾರತದ ಪರ ಅರ್ಷದೀಪ್ ಮತ್ತು ರಿಂಕು ಸಿಂಗ್ ತಲಾ ಒಂದು ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com