ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಆಸಿಸ್ ನಾಯಕ: ಅತಿ ಹೆಚ್ಚು ಬೆಲೆಗೆ ಮಾರಾಟವಾದ ಮೊದಲ ಆಟಗಾರ ಪ್ಯಾಟ್ ಕಮಿನ್ಸ್

2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದ್ದು, ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಟಗಾರನೋರ್ವ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿದ್ದಾರೆ.
ಐಪಿಎಲ್ ಹರಾಜು
ಐಪಿಎಲ್ ಹರಾಜು

ದುಬೈ: 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದ್ದು, ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಟಗಾರನೋರ್ವ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿದ್ದಾರೆ.

ಹೌದು.. 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ‌‌ ಬೆಂಗಳೂರು ಮತ್ತು ಹೈದರಾಬಾದ್‌ ತೀವ್ರ ಪೈಪೋಟಿಯಲ್ಲಿ ಕಡೆಗೂ ಹೈದರಾಬಾದ್‌ ತಂಡ ಪ್ಯಾಟ್‌ ಕಮ್ಮಿನ್ಸ್ ರನ್ನು ಐಪಿಎಲ್‌ ಇತಿಹಾಸದಲ್ಲಿಯೇ 20.50 ಕೋಟಿ ರೂ. ದುಬಾರಿ ಮೊತ್ತಕ್ಕೆ ಖರೀದಿಸಿದೆ. 

ಐಪಿಎಲ್ ಇತಿಹಾಸದಲ್ಲಿ ಅತೀ  ಹೆಚ್ಚು ಬೆಲೆಗೆ ಮಾರಾಟವಾದ ಆಟಗಾರರ ಪಟ್ಟಿ ಇಂತಿದೆ.

ಐಪಿಎಲ್ ಹರಾಜು ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ವೆಸ್ಟ್ ಇಂಡೀಸ್ ನ Rovman Powell ರಾಜಸ್ಥಾನ ರಾಯಲ್ಸ್ ತಂಡದ ಪಾಲಾದರು. 7.4 ಕೋಟಿ ರೂಗೆ ರಾಜಸ್ಥಾನ ರಾಯಲ್ಸ್ ತಂಡ ರೋಮನ್ ಪಾವೆಲ್ ರನ್ನು ಖರೀದಿಸಿದೆ. ಇಂಗ್ಲೆಂಡ್ ತಂಡದ ಹ್ಯಾರಿ ಬ್ರೂಕ್ 4 ಕೋಟಿ ರೂಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮಾರಾಟವಾದರು. ಆಸ್ಟ್ರೇಲಿಯಾದ ಮತ್ತೋರ್ವ ಬ್ಯಾಟರ್ ಟ್ರಾವಿಸ್ ಹೆಡ್ 6.8 ಕೋಟಿ ರೂಗೆ ಸನ್ ರೈಸರ್ಸ್ ತಂಡದ ಪಾಲಾಗಿದ್ದಾರೆ. ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ರವೀಂದ್ರ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 1.80 ಕೋಟಿ ರೂ.ಗೆ ಖರೀದಿಸಿದೆ.

ಶ್ರೀಲಂಕಾದ ವನಿಂದು ಹಸರಂಗ 1.5 ಕೋಟಿ ರೂಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಪಾಲಾಗಿದ್ದಾರೆ. ಭಾರತದ ಶಾರ್ದೂಲ್ ಠಾಕೂರ್ (Shardul Thakur)4 ಕೋಟಿ ರೂಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಅಫ್ಘಾನಿಸ್ತಾನದ ಅಜ್ಮತುಲ್ಲಾ ಒಮರ್ಜಿ (Azmatullah Omarzai) 50 ಲಕ್ಷ ರೂಗೆ ಗುಜರಾತ್ ಟೈಟನ್ಸ್ ಪಾಲಾಗಿದ್ದಾರೆ. ದಕ್ಷಿಣ ಆಫ್ರಿಕಾದ ಜೆರಾಲ್ಡ್ ಕೊಯೆಟ್ಜಿ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದಾರೆ. ನ್ಯೂಜಿಲೆಂಡ್ ಆಲ್ರೌಂಡರ್ 14 ಕೋಟಿ ರೂಗಳಿಗೆ ಚೆನ್ನೈ ಸೂಪರ್ ಕಿಂಗ ತಂಡಕ್ಕೆ ಸೇರಿಕೊಂಡಿದ್ದಾರೆ. 

ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಕ್ರಿಸ್ ವೋಕ್ಸ್ 4.2 ಕೋಟಿ ರೂಗೆ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com