3ನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾವನ್ನು 78 ರನ್‌ಗಳಿಂದ ಮಣಿಸಿ ಸರಣಿ ಗೆದ್ದ ಭಾರತ!

ಆತಿಥೇಯ ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ ನಡುವೆ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1 ಅಂತರದಿಂದ ವಶಪಡಿಸಿಕೊಂಡಿದೆ.
ಟೀಂ ಇಂಡಿಯಾ
ಟೀಂ ಇಂಡಿಯಾ

ಆತಿಥೇಯ ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ ನಡುವೆ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1 ಅಂತರದಿಂದ ವಶಪಡಿಸಿಕೊಂಡಿದೆ.

ಮೂರನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಪಡೆ 78 ರನ್ ಗಳ ಜಯ ಸಾಧಿಸಿದೆ. 297 ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 218 ರನ್ ಗಳಿಸಲಷ್ಟೇ ಶಕ್ತವಾಯಿತು. ಸರಣಿಯ ಮೊದಲ ಪಂದ್ಯವನ್ನು ಭಾರತ ಮತ್ತು ಎರಡನೇ ಏಕದಿನ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದುಕೊಂಡಿತ್ತು.

ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡನ್ ಮಾರ್ಕ್ರಾಮ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಸಂಜು ಸ್ಯಾಮ್ಸನ್ (118) ಮತ್ತು ತಿಲಕ್ ವರ್ಮಾ (52) ಅವರ ಅದ್ಭುತ ಇನ್ನಿಂಗ್ಸ್‌ನ ಆಧಾರದ ಮೇಲೆ ಭಾರತ 50 ಓವರ್‌ಗಳಲ್ಲಿ 296 ರನ್ ಗಳಿಸಿತು. ಬುರಾನ್ ಹೆಂಡ್ರಿಕ್ಸ್ ಗರಿಷ್ಠ 3 ವಿಕೆಟ್ ಪಡೆದರು.
ಉತ್ತರವಾಗಿ ದಕ್ಷಿಣ ಆಫ್ರಿಕಾ ಪರ ಟೋನಿ ಡಿ ಜೋರ್ಜಿ (81) ಮಾತ್ರ ಉತ್ತಮ ಇನಿಂಗ್ಸ್ ಆಡಿದರು. ಅವರನ್ನು ಬಿಟ್ಟರೆ ಬೇರಾವ ಬ್ಯಾಟ್ಸ್‌ಮನ್‌ಗೂ ದೊಡ್ಡ ಇನ್ನಿಂಗ್ಸ್‌ ಆಡಲು ಸಾಧ್ಯವಾಗಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 4 ವಿಕೆಟ್ ಪಡೆದರು.

ತಮ್ಮ ODI ವೃತ್ತಿಜೀವನದ ಮೊದಲ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಸ್ಯಾಮ್ಸನ್ 110 ಎಸೆತಗಳನ್ನು ಎದುರಿಸಿ ಶತಕ ಪೂರೈಸಿದರು. ಅವರ ಬ್ಯಾಟ್‌ನಿಂದ 6 ಬೌಂಡರಿ ಮತ್ತು 3 ಸಿಕ್ಸರ್‌ ಸೇರಿ 118 ರನ್ ಬಾರಿಸಿದರು. ಇದು ಅವರ ODI ವೃತ್ತಿಜೀವನದ ಮೊದಲ ಶತಕವಾಗಿದೆ. ಈ ಇನ್ನಿಂಗ್ಸ್‌ನಲ್ಲಿ ಅವರು ಏಕದಿನದಲ್ಲಿ 500 ರನ್‌ಗಳನ್ನು ಪೂರೈಸಿದರು.

ಪಂದ್ಯದಲ್ಲಿ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಅರ್ಷದೀಪ್ 9 ಓವರ್‌ಗಳಲ್ಲಿ 1 ಮೇಡನ್ ಓವರ್‌ನಲ್ಲಿ 30 ರನ್ ನೀಡಿ 4 ವಿಕೆಟ್ ಪಡೆದರು. ಅವೇಶ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಪಡೆದರೆ ಮುಖೇಶ್ ಕುಮಾರ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದರು.

ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಜೋರ್ಜಿ ಎರಡನೇ ಪಂದ್ಯದಲ್ಲೂ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ 87 ಎಸೆತಗಳಲ್ಲಿ 81 ರನ್ ಗಳಿಸಿದ್ದರು. ಅವರ ಬ್ಯಾಟ್‌ನಿಂದ 6 ಬೌಂಡರಿ ಮತ್ತು 3 ಸಿಕ್ಸರ್‌ ಸಿಡಿಸಿದರು. ಆದರೆ, ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com