ಪ್ರಬಲ ಆಸಿಸ್ ವಿರುದ್ಧ ಭರ್ಜರಿ ಜಯ: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಟೀಂ ಇಂಡಿಯಾ ಮತ್ತಷ್ಟು ಸನಿಹ!
ದುಬೈ: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನ ಫೈನಲ್ ಗೆ ಮತ್ತಷ್ಟು ಸನಿಹವಾಗಿದೆ.
ಹೌದು... ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ ಶನಿವಾರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ಸ್ಥಾನ ಪಡೆಯುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ. ಈ ಗೆಲುವಿನೊಂದಿಗೆ ಭಾರತವು ನಾಲ್ಕು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು ಮಾತ್ರವಲ್ಲದೇ WTC ಪಾಯಿಂಟ್‌ಗಳ ಪಟ್ಟಿಯಲ್ಲಿ ತನ್ನ ಗೆಲುವಿನ ಶೇಕಡಾವಾರು ಪ್ರಮಾಣವನ್ನೂ ಹೆಚ್ಚಿಸಿಕೊಂಡಿದೆ.
ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಜಯಗಳಿಸಿದ ನಂತರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಪಾಯಿಂಟ್ಸ್ ಟೇಬಲ್ ನಲ್ಲಿ ಈ ಹಿಂದೆ ಶೇ.58.93 ಗೆಲುವಿನ ಶೇಕಡಾವಾರು ಹೊಂದಿದ್ದ ಭಾರತ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾದ ನಂತರ ಎರಡನೇ ಸ್ಥಾನದಲ್ಲಿತ್ತು. ಈಗ ಗೆಲುವಿನ ಶೇಕಡಾವಾರನ್ನು ಹೆಚ್ಚಿಸಿಕೊಂಡಿದ್ದು, ಶೇ.61.67 ರಷ್ಟು ಹೊಂದಿದೆ. ಆದರೆ ತಮ್ಮ WTC ಫೈನಲ್ ನಲ್ಲಿ ಸ್ಥಾನ ಖಚಿತ ಪಡಿಸಲು ಡ್ರಾದ ಅಗತ್ಯವಿದ್ದ ಆಸ್ಟ್ರೇಲಿಯಾಈ ಸೋಲಿನ ಮೂಲಕ ತಮ್ಮ ಗೆಲುವಿನ ಶೇಕಡಾವಾರು ಶೇಕಡಾ 75.56 ರಿಂದ 70.83 ಕ್ಕೆ ಇಳಿಸಿಕೊಂಡಿದೆ.
ಹಿಂದಿನ WTC ಸೈಕಲ್‌ನಿಂದ ರನ್ನರ್ ಅಪ್ ಆಗಿರುವ ಭಾರತ, ತಮ್ಮ ಸ್ಥಾನವನ್ನು ಕಾಯ್ದಿರಿಸಲು ಬಾರ್ಡರ್-ಗವಾಸ್ಕರ್ ಸರಣಿಯ ಉಳಿದ ಮೂರು ಪಂದ್ಯಗಳಲ್ಲಿ ಕನಿಷ್ಠ ಎರಡನ್ನಾದರೂ ಗೆಲ್ಲಬೇಕಾಗಿದೆ. ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ, ಡಬ್ಲ್ಯುಟಿಸಿ ಫೈನಲ್ ತಲುಪುವ ಹೊರಗಿನ ಅವಕಾಶವನ್ನು ಹೊಂದಿವೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ