ಹರ್ಮನ್ ಪ್ರೀತ್ ಕೌರ್
ಹರ್ಮನ್ ಪ್ರೀತ್ ಕೌರ್

ಟಿ20 ಕ್ರಿಕೆಟ್ ನಲ್ಲಿ ಎರಡು ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್!

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. 

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. 

ಹರ್ಮನ್‌ಪ್ರೀತ್ ಅವರ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ 150ನೇ ಪಂದ್ಯ ಇದಾಗಿದ್ದು ಇನ್ನು 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹರ್ಮನ್‌ಪ್ರೀತ್ ನಂತರ, 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಅವರ ಹೆಸರು ಹೆಚ್ಚು ಟಿ20ಐ ಪಂದ್ಯಗಳನ್ನು ಆಡಿದ ಕ್ರಿಕೆಟಿಗರ ಪಟ್ಟಿಯಲ್ಲಿದೆ. ಭಾರತೀಯ ಪುರುಷರ ಕ್ರಿಕೆಟ್ ತಂಡದ ನಿಯಮಿತ ನಾಯಕ ರೋಹಿತ್ ಇದುವರೆಗೆ 148 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದರೆ, ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಸುಜಿ ಬೇಟ್ಸ್ 143 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

2009ರಲ್ಲಿ ಹರ್ಮನ್‌ಪ್ರೀತ್ ತನ್ನ T20 ಅಂತಾರಾಷ್ಟ್ರೀಯ ಪದಾರ್ಪಣೆ ಮಾಡಿದ್ದರು. ಅವರು ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಡಿದ್ದು ಕೇವಲ 8 ರನ್ ಗಳಿಸಿದರು. ಆದಾಗ್ಯೂ, ಹರ್ಮನ್‌ಪ್ರೀತ್ ಕಳಪೆ ಆರಂಭದ ಹೊರತಾಗಿಯೂ ಸಕಾರಾತ್ಮಕ ಮನೋಭಾವವನ್ನು ಉಳಿಸಿಕೊಂಡರು. ಟಿ20 ಮಾದರಿಯಲ್ಲಿ 149 ಪಂದ್ಯಗಳಲ್ಲಿ 27.97 ಸರಾಸರಿಯಲ್ಲಿ 2,993 ರನ್ ಗಳಿಸಿದ್ದರು. ಈ ಮಾದರಿಯಲ್ಲಿ ಅವರು ಒಂದು ಶತಕ ಮತ್ತು 9 ಅರ್ಧ ಶತಕಗಳನ್ನು ಗಳಿಸಿದ್ದಾರೆ. 

ಇದೀಗ 150ನೇ ಪಂದ್ಯದಲ್ಲಿ ಹರ್ಮನ್‌ಪ್ರೀತ್ 13 ರನ್ ಬಾರಿಸುವ ಮೂಲಕ 3000 ರನ್‌ಗಳ ಗಡಿ ದಾಡಿಟ್ಟು ವಿಶ್ವದ ನಾಲ್ಕನೇ ಮಹಿಳಾ ಕ್ರಿಕೆಟಿಗರಾಗಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com