ಮಹಿಳಾ ಟಿ-20 ವಿಶ್ವಕಪ್ ಸೆಮಿ ಫೈನಲ್: 5 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ, ಫೈನಲ್ ಗೆ ಲಗ್ಗೆ 

ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸುವ ಭಾರತದ ಕನಸು ಭಗ್ನಗೊಂಡಿದೆ. ಆಸ್ಟ್ರೇಲಿಯಾ ಐದು ರನ್ ಗಳಿಂದ ರೋಚಕ ಗೆಲುವು ಸಾಧಿಸಿದ್ದು, ಭಾರತ ಐಸಿಸಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ.
ಗೆಲುವಿನ ಸಂಭ್ರಮದಲ್ಲಿ ಆಸ್ಟ್ರೇಲಿಯಾ ತಂಡ
ಗೆಲುವಿನ ಸಂಭ್ರಮದಲ್ಲಿ ಆಸ್ಟ್ರೇಲಿಯಾ ತಂಡ

ಕೇಪ್ ಟೌನ್: ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸುವ ಭಾರತದ ಕನಸು ಭಗ್ನಗೊಂಡಿದೆ. ಆಸ್ಟ್ರೇಲಿಯಾ ಐದು ರನ್ ಗಳಿಂದ ರೋಚಕ ಗೆಲುವು ಸಾಧಿಸಿದ್ದು, ಭಾರತ ಐಸಿಸಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ.

ಇಲ್ಲಿನ ನ್ಯೂ ಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ಆಸ್ಟ್ರೇಲಿಯಾ ಪರ ಬೆತ್ ಮೂನಿ 54, ಮೆಗಾ ಲ್ಯಾನಿಂಗ್ 49, ಆಸ್ಲೀ ಗಾರ್ಡ್ನರ್ 31 ರನ್ ಗಳಿಸಿದರು. ಭಾರತದ ಪರ ಶಿಖಾ ಪಾಂಡೆ, ದೀಪ್ತಿ ಶರ್ಮಾ ಹಾಗೂ ರಾಧಾ ಯಾದವ್ ತಲಾ 4 ವಿಕೆಟ್ ಪಡೆದರು.

ಆಸ್ಚ್ರೇಲಿಯಾ ನೀಡಿದ 173 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ ಪರ ಹರ್ಮನ್ ಪ್ರೀತ್ ಕೌರ್ 52, ಜೆಮಿಯಾ ರಾಡ್ರಿಗನ್ 43 ಹಾಗೂ ದೀಪ್ತಿ ಶರ್ಮಾ 20 ರನ್ ಗಳಿಸಿದರು. ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಇದರಿಂದಾಗಿ ಭಾರತ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ ಆಸ್ಟ್ರೇಲಿಯಾ ತಂಡ 5 ರನ್ ಗಳಿಂದ ರೋಚಕ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com