2023 ವಿಶ್ವಕಪ್ ವೇಳೆಗೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೊಲ್ಕರ್ ಅವರ ಪ್ರತಿಮೆಯನ್ನು ಶೀಘ್ರದಲ್ಲೇ ನೋಡಲಿದ್ದಾರೆ. ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಈ ವಿಷಯ ಪ್ರಕಟಿಸಿದ್ದಾರೆ. 
ಅಮೋಲ್ ಕಾಳೆ, ಸಚಿನ್ ತೆಂಡೊಲ್ಕರ್
ಅಮೋಲ್ ಕಾಳೆ, ಸಚಿನ್ ತೆಂಡೊಲ್ಕರ್

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೊಲ್ಕರ್ ಅವರ ಪ್ರತಿಮೆಯನ್ನು ಶೀಘ್ರದಲ್ಲೇ ನೋಡಲಿದ್ದಾರೆ. ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಈ ವಿಷಯ ಪ್ರಕಟಿಸಿದ್ದಾರೆ. 

ಪ್ರಸಿದ್ಧ ಸ್ಟೇಡಿಯಂನಲ್ಲಿ ಇದೇ ಮೊದಲ ಬಾರಿಗೆ ಆಟಗಾರರೊಬ್ಬರ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ. 2023ರ ವಿಶ್ವಕಪ್ ಹೊತ್ತಿಗೆ ಈ ಪ್ರತಿಮೆ ಅನಾವರಣಗೊಳ್ಳಲಿದೆ. ವಾಂಖೆಡೆಯಲ್ಲಿ ಮಾಸ್ಟರ್ ಬ್ಲಾಸ್ಟರ್‌ ಸಚಿನ್ ತೆಂಡೊಲ್ಕರ್ ಅವರ ಸುವರ್ಣ ಮಹೋತ್ಸವ ಆಚರಣೆ ಭಾಗವಾಗಿ ಎಂಸಿಎ ಹೊರಗೆ ವೃತ್ತಾಕಾರದ ವೇದಿಕೆಯಲ್ಲಿ ಸಚಿನ್ ಪ್ರತಿಮೆ ನಿರ್ಮಿಸಲಾಗುತ್ತಿದೆ. 

ಈ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ತೆಂಡೊಲ್ಕರ್,  ನನ್ನ ವೃತ್ತಿ ಜೀವನ ಈ ಮೈದಾನದಿಂದ ಪ್ರಾರಂಭವಾಗಿತ್ತು. ನನ್ನ ಜೀವನದ ಅತಿದೊಡ್ಡ ಕ್ರಿಕೆಟ್ ಕ್ಷಣವೆಂದರೆ 2011ರಲ್ಲಿ ನಾವು ವಿಶ್ವ ಕಪ್ ನಲ್ಲಿ ಗೆಲುವು ಸಾಧಿಸಿದ್ದು, ನಾನು ಕೊನೆಯ ಪಂದ್ಯವನ್ನು 2013ರಲ್ಲಿ ಆಡಿದ್ದು, ಹೆಚ್ಚಿನ ನನ್ನ ನೆನಪುಗಳು ಈ ಕ್ರೀಡಾಂಗಣದಲ್ಲಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com