ಬೂಮ್ರಾ ಗಾಯದಿಂದ ಚೇತರಿಕೆ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಸೇರ್ಪಡೆ

ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬೂಮ್ರಾ ಶ್ರೀಲಂಕಾ ವಿರುದ್ಧದ ಮುಂದಿನ ಏಕದಿನ ಸರಣಿಗಾಗಿ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆನ್ನುನೋವಿನ ಸಮಸ್ಯೆಯಿಂದಾಗಿ ಬೂಮ್ರಾ ಟಿ. 20 ವಿಶ್ವಕಪ್ ನಲ್ಲಿ ಆಡಿರಲಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದ ಟಿ-20 ಪಂದ್ಯವೇ ಅವರ ಕೊನೆಯ ಪಂದ್ಯವಾಗಿತ್ತು.
ಜಸ್ಪ್ರೀತ್ ಬೂಮ್ರಾ
ಜಸ್ಪ್ರೀತ್ ಬೂಮ್ರಾ

ನವ ದೆಹಲಿ: ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬೂಮ್ರಾ ಶ್ರೀಲಂಕಾ ವಿರುದ್ಧದ ಮುಂದಿನ ಏಕದಿನ ಸರಣಿಗಾಗಿ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆನ್ನುನೋವಿನ ಸಮಸ್ಯೆಯಿಂದಾಗಿ ಬೂಮ್ರಾ ಟಿ. 20 ವಿಶ್ವಕಪ್ ನಲ್ಲಿ ಆಡಿರಲಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದ ಟಿ-20 ಪಂದ್ಯವೇ ಅವರ ಕೊನೆಯ ಪಂದ್ಯವಾಗಿತ್ತು.

 ಬೂಮ್ರಾ ಮರಳುವುದರೊಂದಿಗೆ ಭಾರತದ ಬೌಲಿಂಗ್ ಶಕ್ತಿ ವೃದ್ಧಿಸಲಿದೆ.  ಟೀಂ ಇಂಡಿಯಾಕ್ಕೆ ಬೌಲಿಂಗ್ ಸಮಸ್ಯೆ ಕಾಡುತಿತ್ತು.  ಸ್ವದೇಶದಲ್ಲಿ ನಡೆಯಲಿರುವ 50 ಓವರ್ ಗಳ ವಿಶ್ವಕಪ್ ನಲ್ಲಿ ಬೂಮ್ರಾ ಅವರಿಗೆ ಟೀಂ ಮ್ಯಾನೇಜ್ ಮೆಂಟ್ ಯಾವ ರೀತಿಯ ಪ್ರಾಮುಖ್ಯತೆ ನೀಡಲಿದೆ ಎಂಬುದು ಕುತೂಹಲ ಕೆರಳಿಸಿದೆ. 

ಸೆಪ್ಟೆಂಬರ್ 2022ರಿಂದ ಕ್ರಿಕೆಟ್ ನಿಂದ ಹೊರಗುಳಿದಿದ್ದ ಬೂಮ್ರಾ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಅವರು ಚಿಕಿತ್ಸೆ ಪಡೆದ ಬಳಿಕ ಸದೃಢರಾಗಿದ್ದಾರೆ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಹೇಳಿದ್ದು, ಶೀಘ್ರದಲ್ಲೇ ಅವರು ಟೀಂ ಇಂಡಿಯಾ ಸೇರಲಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ. 

ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಭಾರತ ತಂಡ ಇಂತಿದೆ:  ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್) ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಚಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಶಿರಾಜ್, ಉಮ್ರಾನ್ ಮಲ್ಲಿಕ್, ಅರ್ಶ್ ದೀಪ್ ಸಿಂಗ್ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com