ಆಡಿದ್ದು ಒಂದೇ ಪಂದ್ಯ; ಶ್ರೀಲಂಕಾ ವಿರುದ್ಧದ T20 ಸರಣಿಯಿಂದ ಸಂಜು ಸ್ಯಾಮ್ಸನ್ ಔಟ್!

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಉಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. 
ಸಂಜು ಸ್ಯಾಮ್ಸನ್
ಸಂಜು ಸ್ಯಾಮ್ಸನ್

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಉಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. 

ಇಂದು ಪುಣೆಯಲ್ಲಿ ನಡೆಯಲಿರುವ ಪಂದ್ಯಕ್ಕೆ ಮುಂಬೈನಿಂದ ಟೀಂ ಇಂಡಿಯಾ ತಂಡದೊಂದಿಗೆ ಸಂಜು ಸ್ಯಾಮ್ಸನ್ ಹೋಗಿಲ್ಲ. ಬಿಸಿಸಿಐನ ವೈದ್ಯಕೀಯ ತಂಡವು ನಿನ್ನೆ ಮಧ್ಯಾಹ್ನ ಸಂಜು ಸ್ಯಾಮ್ಸನ್ ಅವರನ್ನು ಸ್ಕ್ಯಾನ್ ಮಾಡಿದ್ದು ಇದಾದ ನಂತರ ಸಂಜು ಸ್ಯಾಮ್ಸನ್‌ಗೆ ವಿಶ್ರಾಂತಿ ಮತ್ತು ಪುನರ್ವಸತಿಗೆ ಸಲಹೆ ನೀಡಿದ್ದರು. ಇದೀಗ ಬಿಸಿಸಿಐನ ಆಯ್ಕೆ ಸಮಿತಿಯು ಸಂಜು ಸ್ಯಾಮ್ಸನ್ ಬದಲಿಗೆ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ. 

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕಳೆದ ಮಂಗಳವಾರ ನಡೆದಿದ್ದ ಪಂದ್ಯದಲ್ಲಿ ಮಿಡ್-ಆಫ್‌ನಲ್ಲಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸಂಜು ಸ್ಯಾಮ್ಸನ್ ಗಾಯಗೊಂಡಿದ್ದರು. 3 ಪಂದ್ಯಗಳ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ 1-0 ಮುನ್ನಡೆ ಸಾಧಿಸಿದೆ. ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 2 ರನ್‌ಗಳಿಂದ ಗೆದ್ದುಕೊಂಡಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ, 'ಸಂಜು ಸ್ಯಾಮ್ಸನ್ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ. ಅವರನ್ನು ಮುಂಬೈನಲ್ಲಿ ಸ್ಕ್ಯಾನ್ ಮಾಡಲಾಗಿದೆ. ಜಿತೇಶ್ ಶರ್ಮಾ ತಂಡವನ್ನು ಸೇರಿಕೊಂಡಿದ್ದಾರೆ ಎಂದರು. ಭಾರತ ತಂಡ ಶ್ರೀಲಂಕಾ ವಿರುದ್ಧ ಇಂದು ಪುಣೆಯಲ್ಲಿ ಎರಡನೇ T20 ಪಂದ್ಯವನ್ನು ಆಡಲಿದೆ. 

2ನೇ ಟಿ20 ಪಂದ್ಯಕ್ಕೆ ಭಾರತ ತಂಡ: 
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್ , ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com