ಶ್ರೀಲಂಕಾ ವಿರುದ್ಧದ ಅಂತಿಮ ಟಿ-20 ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ

ಭಾರತ ಮತ್ತು ಶ್ರೀಲಂಕಾ ನಡುವಣ ಟಿ-20 ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯ ರಾಜ್ ಕೋಟ್ ನ ಸೌರಾಷ್ಟ್ರ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.
ಟಾಸ್ ಗೆದ್ದು ಟೀಂ ಇಂಡಿಯಾ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ
ಟಾಸ್ ಗೆದ್ದು ಟೀಂ ಇಂಡಿಯಾ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ

ರಾಜ್ ಕೋಟ್: ಭಾರತ ಮತ್ತು ಶ್ರೀಲಂಕಾ ನಡುವಣ ಟಿ-20 ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯ ರಾಜ್ ಕೋಟ್ ನ ಸೌರಾಷ್ಟ್ರ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿ 1-1 ಅಂತರದಲ್ಲಿ ಸಮವಾಗಿದ್ದು, ಇಂದಿನ ಪಂದ್ಯ ಸರಣಿ ಗೆಲ್ಲಲು ಉಭಯ ತಂಡಗಳಿಗೂ ನಿರ್ಣಾಯಕ ಪಂದ್ಯವಾಗಲಿದೆ.

ರಾಜ್ ಕೋಟ್ ಮೈದಾನದ ಫಿಚ್ ಬ್ಯಾಟಿಂಗ್ ಗೆ ಉತ್ತಮವಾಗಿದ್ದು, ಬೌಲಿಂಗ್ ಸಮಸ್ಯೆ ಸೃಷ್ಟಿಸಬಹುದು ಎನ್ನಲಾಗಿದ್ದು, ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಲಂಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಭಾನುಕಾ ರಾಜಪಕ್ಸೆ ಬದಲಿಗೆ ಅವಿಷ್ಕಾ ಫೆರ್ನಾಂಡೋ ತಂಡದಲ್ಲಿದ್ದಾರೆ.

ಟೀಂ ಇಂಡಿಯಾ ತಂಡ ಇಂತಿದೆ: ಇಶಾನ್ ಕಿಶಾನ್, ಶುಭ್ ಮನ್ ಗಿಲ್, ಸೂರ್ಯ ಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲ್ಲಿಕ್, ಅರ್ಶದೀಪ್ ಸಿಂಗ್, ಚಾಹಲ್.

ಶ್ರೀಲಂಕಾ ತಂಡ ಇಂತಿದೆ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ,  ಅವಿಷ್ಕe ಫೆರ್ನಾಂಡೊ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ದಸುನ್ ಶನಕ,  ವನಿಂದು ಹಸರಂಗ, ಚಾಮಿಕ ಕರುಣರತ್ನ, ಮಹೇಶ್ ತೀಕ್ಷ್ಣ, ಕಸುನ್ ರಜಿತ, ದಿಲ್ಶನ್ ಮಧುಶಂಕ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com