ಭಾರತ vs ಶ್ರೀಲಂಕಾ ಏಕದಿನ ಸರಣಿ 2023: ಪೂರ್ಣ ವೇಳಾಪಟ್ಟಿ, ದಿನಾಂಕ, ಸಮಯ, ಆಟಗಾರರ ಪಟ್ಟಿ

ಶ್ರೀಲಂಕಾ ವಿರುದ್ಧದ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇನ್ನು ಜನವರಿ 10ರಿಂದ ಸರಣಿ ಆರಂಭಗೊಳ್ಳಲಿದೆ.
ಟೀಂ ಇಂಡಿಯಾ ತಂಡ
ಟೀಂ ಇಂಡಿಯಾ ತಂಡ
Updated on: 

ಶ್ರೀಲಂಕಾ ವಿರುದ್ಧದ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇನ್ನು ಜನವರಿ 10ರಿಂದ ಸರಣಿ ಆರಂಭಗೊಳ್ಳಲಿದೆ.

ಭಾರತವು 2023ರಲ್ಲಿ ಐಸಿಸಿ ಪುರುಷರ ಏಕದಿನ ವಿಶ್ವಕಪ್‌ನ 13ನೇ ಆವೃತ್ತಿಗೆ ಆತಿಥ್ಯ ವಹಿಸಲು ಸಿದ್ಧವಾಗಿರುವುದರಿಂದ, ತಂಡದ ಗಮನವು 50-ಓವರ್‌ಗಳ ಪಂದ್ಯಗಳತ್ತ ಬದಲಾಗುತ್ತದೆ. ಸರಣಿಯು ಜನವರಿ 10ರಂದು ಗುವಾಹಟಿಯಲ್ಲಿ ಆರಂಭವಾಗಲಿದ್ದು, ಮುಂದಿನ ಎರಡು ಪಂದ್ಯಗಳು ಕ್ರಮವಾಗಿ ಜನವರಿ 12 ಮತ್ತು 15 ರಂದು ಕೋಲ್ಕತ್ತಾ ಮತ್ತು ತಿರುವನಂತಪುರದಲ್ಲಿ ನಡೆಯಲಿವೆ.

ಕಳೆದ ಎರಡು ದ್ವಿಪಕ್ಷೀಯ ಸರಣಿಗಳಿಂದ ಹೊರಗುಳಿದಿದ್ದ ಭಾರತದ ನಾಯಕ ರೋಹಿತ್ ಶರ್ಮಾ ಅವರು ಮೂರು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದು, ಇದು ಏಕದಿನ ವಿಶ್ವಕಪ್‌ಗಾಗಿ ಭಾರತದ ಸಿದ್ಧತೆಗಳನ್ನು ಅಧಿಕೃತವಾಗಿ ಪ್ರಾರಂಭಿಸಲಿದೆ. ಅವರ ಜೊತೆಗೆ ಇನ್ನೂ ಅನೇಕ ಅನುಭವಿ ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳುತ್ತಾರೆ.

ಶ್ರೀಲಂಕಾ ವಿರುದ್ಧ ಭಾರತ ಕೊನೆಯ ಏಕದಿನ ಸರಣಿಯು ಜುಲೈ 2021ರಲ್ಲಿ ಶಿಖರ್ ಧವನ್ ಅವರ ನಾಯಕತ್ವದಲ್ಲಿ ಭಾರತೀಯ ತಂಡವು ದ್ವೀಪ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಿತು. ಭಾರತ ಸರಣಿಯನ್ನು 2-1 ರಿಂದ ಗೆದ್ದುಕೊಂಡಿದ್ದು, ಮುಂದಿನ ಮೂರು ಪಂದ್ಯಗಳಲ್ಲಿಯೂ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಏಕದಿನ ಸರಣಿ ವೇಳಾಪಟ್ಟಿ
1 ನೇ ODI, ಗುವಾಹಟಿ (ಜನವರಿ 10)
2ನೇ ODI, ಕೋಲ್ಕತ್ತಾ (ಜನವರಿ 12)
3ನೇ ODI, ತಿರುವನಂತಪುರಂ (ಜನವರಿ 15)

ಪಂದ್ಯದ ಸಮಯ
ಎಲ್ಲಾ ಮೂರು ಏಕದಿನ ಪಂದ್ಯಗಳು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುತ್ತವೆ. ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌  ನೇರ ಪ್ರಸಾರ ಮಾಡುತ್ತದೆ. ಅಲ್ಲದೆ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.

ಭಾರತ ಏಕದಿನ ತಂಡ: 
ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com