IND vs SL 1st ODI : ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಶ್ರೀಲಂಕಾ, ಆಡುವ 11ರ ಬಳಗದ ಮಾಹಿತಿ

ಮಂಗಳವಾರ ಇಲ್ಲಿನ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಶ್ರೀಲಂಕಾ ತಂಡದ ನಾಯಕ ದಸುನ್ ಶನಕ - ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
ಶ್ರೀಲಂಕಾ ತಂಡದ ನಾಯಕ ದಸುನ್ ಶನಕ - ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಗುವಾಹಟಿ: ಮಂಗಳವಾರ ಇಲ್ಲಿನ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ, ಇಬ್ಬನಿ ಬೀಳುವ ಕಾರಣದಿಂದ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಇಶಾನ್ ಕಿಶನ್ ಪಂದ್ಯದಿಂದ ಹೊರಗುಳಿದಿರುವ ಕಾರಣ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಭಾರತಕ್ಕೆ ಓಪನಿಂಗ್ ನೀಡಲಿದ್ದಾರೆ.

ಭಾರತ ತಂಡದ ಆಡುವ 11ರ ಬಳಗದಲ್ಲಿ ಇಶಾನ್ ಕಿಶನ್ ಮತ್ತು ಟಿ20 ಸರಣಿಯಲ್ಲಿ ಶತಕ ಬಾರಿಸಿರುವ ಸೂರ್ಯಕುಮಾರ್ ಯಾದವ್‌ಗೆ ಅವಕಾಶ ನೀಡಿಲ್ಲ. ಯಾದವ್‌ ಬದಲಿಗೆ ಶ್ರೇಯಸ್ ಅಯ್ಯರ್‌ಗೆ ಆಡುವ ಬಳಗದಲ್ಲಿ ಸ್ಥಾನ ನೀಡಲಾಗಿದೆ.

ಶ್ರೀಲಂಕಾ ಪರ ದಿಲ್ಶನ್ ಮಧುಶಂಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಉಭಯ ತಂಡಗಳ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಉಮ್ರಾನ್ ಮಲಿಕ್, ಯುಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಶ್ರೀಲಂಕಾ: ಪಾತುಮ್ ನಿಸಾಂಕ, ಕುಶಾಲ್ ಮೆಂಡಿಸ್, ಆವಿಷ್ಕಾ ಫರ್ನಾಂಡೊ, ಧನಂಜಯ ಡಿಸಿಲ್ವ, ಚರಿತ್ ಅಸಲಂಕಾ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ದುನಿತ್ ವೆಲ್ಲಾಲಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com