ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟ20 ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಏಕದಿನ ಮತ್ತು ಟೆಸ್ಟ್ ತಂಡವನ್ನು ನಾಯಕ ರೋಹಿತ್ ಶರ್ಮಾ ಮುನ್ನಡೆಸಲಿದ್ದರೆ ಟಿ20 ತಂಡದ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಕೆಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಕೆಎಲ್ ರಾಹುಲ್ ಬದಲಿಗೆ ಕೆ.ಎಸ್ ಭರತ್ ಅವರಿಗೆ ಅವಕಾಶ ನೀಡಲಾಗಿದ್ದು, ಅವರು ವಿಕೆಟ್ ಕೀಪರ್ ಆಗಿ ತಂಡದಲ್ಲಿ ಉಳಿಯಲಿದ್ದಾರೆ. ಇದಲ್ಲದೇ ಶಹಬಾಜ್ ಅಹಮದ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಅಕ್ಷರ್ ಪಟೇಲ್‌ಗೆ ವಿಶ್ರಾಂತಿ ನೀಡಲಾಗಿದೆ. ಶಾರ್ದೂಲ್ ಠಾಕೂರ್ ಕೂಡ ತಂಡಕ್ಕೆ ಮರಳಿದ್ದಾರೆ. ಕೌಟುಂಬಿಕ ಕೆಲಸದಿಂದಾಗಿ ಕೆಎಲ್ ಹಾಗೂ ಅಕ್ಷರ್ ಲಭ್ಯರಿಲ್ಲ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ನ್ಯೂಜಿಲೆಂಡ್ ಏಕದಿನ ಪಂದ್ಯಕ್ಕೆ ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ ಮತ್ತು ಉಮ್ರಾನ್ ಮಲಿಕ್.
ಟಿ20 ತಂಡಕ್ಕೆ ಮರಳಿದ ಪೃಥ್ವಿ ಶಾ
ಪೃಥ್ವಿ ಶಾ ಭಾರತದ ಟಿ20 ತಂಡಕ್ಕೆ ಮರಳಿದ್ದು, ಜಿತೇಶ್ ಶರ್ಮಾ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವ ಕಾರಣ ಸಂಜು ಸ್ಯಾಮ್ಸನ್ ಗಾಯದ ಸಮಸ್ಯೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾಗೆ ಸ್ಥಾನ ನೀಡಲಾಗಿಲ್ಲ. ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದರೆ ಸೂರ್ಯಕುಮಾರ್ ಯಾದವ್ ಉಪನಾಯಕರಾಗಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಟಿ20ಗೆ ಭಾರತ ತಂಡ:
ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್(ಉಪನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಸಿಂಗ್ ಚಾಹಲ್, ಅರ್ಷ್‌ದೀಪ್ ಚಾಹಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ ಮತ್ತು ಮುಖೇಶ್ ಕುಮಾರ್
ಜಡೇಜಾಗೆ ಟೆಸ್ಟ್ ಸರಣಿಯಲ್ಲಿ ಅವಕಾಶ
ಆಸ್ಟ್ರೇಲಿಯ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಆಯ್ಕೆಯಾದ ಭಾರತ ತಂಡದಲ್ಲಿ ಇಶಾನ್ ಕಿಶನ್ ಮತ್ತು ಕೆಎಸ್ ಭರತ್ ಅವರನ್ನು ವಿಕೆಟ್ ಕೀಪರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಏಕೆಂದರೆ ರಿಷಬ್ ಪಂತ್ ಕಾರು ಅಪಘಾತದ ಸಂದರ್ಭದಲ್ಲಿ ಗಾಯಗೊಂಡ ಕಾರಣ ಲಭ್ಯವಿರುವುದಿಲ್ಲ. ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರ್ಪಡೆಗೊಂಡಿಲ್ಲ, ಸೂರ್ಯಕುಮಾರ್ ಯಾದವ್ ಮತ್ತು ಜಯದೇವ್ ಉನದ್ಕತ್ ತಂಡದಲ್ಲಿ ಆಯ್ಕೆಯಾಗಿದ್ದಾರೆ.
ಟೆಸ್ಟ್ ಸರಣಿಗೆ ತಂಡ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್(ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್, ಸೂರ್ಯಕುಮಾರ್ ಯಾದವ್.
Advertisement