ಮುಂಬೈ: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾದ ಬ್ಯಾಟರ್ ಶ್ರೇಯಸ್ ಅಯ್ಯರ್ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಮುಂದಿನ ಮೌಲ್ಯಮಾಪನ ಮತ್ತು ನಿರ್ವಹಣೆಗಾಗಿ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ) ತೆರಳಲಿದ್ದಾರೆ.
ಶ್ರೇಯಸ್ ಅಯ್ಯರ್ ಅವರ ಬದಲಿಗೆ ಆಲ್ ಇಂಡಿಯಾ ಸೀನಿಯರ್ ಸೆಲೆಕ್ಷನ್ ಕಮಿಟಿ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಿದೆ.
ಜನವರಿ 18ರಂದು ಹೈದರಾಬಾದಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯವು ನಡೆಯಲಿದೆ.
ಏಕದಿನ ಸರಣಿಗೆ ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ರಜತ್ ಪಟಿದಾರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
Advertisement