ಕೆಎಲ್ ರಾಹುಲ್-ಅಥಿಯಾ ಶೆಟ್ಟಿ
ಕೆಎಲ್ ರಾಹುಲ್-ಅಥಿಯಾ ಶೆಟ್ಟಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್-ಅಥಿಯಾ ಶೆಟ್ಟಿ

ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರೊಂದಿಗೆ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮುಂಬೈ: ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರೊಂದಿಗೆ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂದು ಮುಂಬೈನ ಖಂಡಾಲದಲ್ಲಿರುವ ಸುನೀಲ್ ಶೆಟ್ಟಿ ಅವರ ಐಷಾರಾಮಿ ಫಾರ್ಮ್ ಹೌಸ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಇಂದು ಸಂಜೆ 4 ಗಂಟೆಗೆ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಅಧಿಕೃತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಮದುವೆಗೆ ಕೆಲವೇ ಕೆಲವು ಮಂದಿಯನ್ನು ಮಾತ್ರ ಆಹ್ವಾನಿಸಲಾಗಿದ್ದು, ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ ಎಂದು ತಿಳಿದುಬಂದಿದೆ.

ಮುದ್ದು ಮಗಳ ಮದುವೆ ಸಂಭ್ರಮದಲ್ಲಿರುವ ಸುನೀಲ್ ಶೆಟ್ಟಿ ಅವರು, ಪಂಚೆ ಹಾಕಿಕೊಂಡು ಕ್ಯಾಮೆರಾ ಮುಂದೆ ಬಂದಿದ್ದು, ನಾನು ಈಗ ಅಧಿಕೃತವಾಗಿ ಮಾವ ಆಗಿದ್ದೇನೆ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಬಾಲಿವುಡ್ ನಟ, ಮದುವೆ ಬಹಳ ಸುಂದರವಾಗಿ, ಚಿಕ್ಕದಾಗಿ ಮತ್ತು ಅತ್ಯಂತ ನಿಕಟವಾದ ಕುಟುಂಬ ಕಾರ್ಯಕ್ರಮವಾಗಿತ್ತು ಎಂದು ಹೇಳಿದ್ದಾರೆ.

X

Advertisement

X
Kannada Prabha
www.kannadaprabha.com