ಮೊದಲ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 21 ರನ್ ಗಳಿಂದ ಸೋಲು

ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು 21 ರನ್ ಗಳಿಂದ ನ್ಯೂಜಿಲೆಂಡ್ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. 
ನ್ಯೂಜಿಲೆಂಡ್ ತಂಡದ ಆಟಗಾರರು
ನ್ಯೂಜಿಲೆಂಡ್ ತಂಡದ ಆಟಗಾರರು

ರಾಂಚಿ: ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು 21 ರನ್ ಗಳಿಂದ ನ್ಯೂಜಿಲೆಂಡ್ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. 

ನ್ಯೂಜಿಲ್ಯಾಂಡ್ ಪರ ಫಿನ್ ಅಲೆನ್ 35, ಡೆವೊನ್ ಕಾನ್ವೇ 52, ಗ್ಲೇನ್ ಪಿಲಿಪ್ಸ್ 17 ರನ್ ಪೇರಿಸಿದ್ದರೆ ಡೇರಿಲ್ ಮಿಚೆಲ್ ಅಜೇಯ 59 ರನ್ ಬಾರಿಸಿದರು. ಭಾರತ ಪರ ಬೌಲಿಂಗ್ ನಲ್ಲಿ ವಾಷಿಂಗ್ಟನ್ ಸುಂದರ್ 2, ಅರ್ಷ್ ದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

ನ್ಯೂಜಿಲೆಂಡ್ ನೀಡಿದ ಬೃಹತ್  176 ರನ್ ಗಳ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ  20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಶುಭ್ ಮನ್ ಗಿಲ್ 7, ಇಶಾನ್ ಕಿಶಾನ್ 4, ಸೂರ್ಯಕುಮಾರ್ ಯಾದವ್ 47, ಹಾರ್ದಿಕ್ ಪಾಂಡ್ಯ 21, ವಾಷಿಂಗ್ಟನ್ ಸುಂದರ್ 50 , ದೀಪಕ್ ಹೂಡಾ 10 ರನ್ ಗಳಿಸಿದರು.

 ವಾಷಿಂಗ್ಟನ್ ಸುಂದರ್ ಮತ್ತು ಸೂರ್ಯಕುಮಾರ್ ಯಾದವ್ ಹೊರತುಪಡಿಸಿದರೆ ಬೇರೆ ಯಾವ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಇದರಿಂದಾಗಿ ನ್ಯೂಜಿಲೆಂಡ್ ತಂಡ 21 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com