ಲಖನೌ: ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮಾರಕ ಬೌಲಿಂಗ್ ಮೂಲಕ ವಿಕೆಟ್ ಪಡೆದ ಭಾರತ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಹಲ್ ದಾಖಲೆ ಬರೆದಿದ್ದಾರೆ.
ಹೌದು.. ಲಖನೌನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಮೈದಾನದಲ್ಲಿ 2ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ಆರಂಭಿಕ ಆಟಗಾರ ಫಿನ್ ಅಲೆನ್ ರನ್ನು ಕ್ಲೀನ್ ಬೋಲ್ಡ್ ಮಾಡಿದ ಚಹಲ್ ತಮ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವೃತ್ತಿ ಜೀವನದ 91ನೇ ವಿಕೆಟ್ ಪಡೆದರು. ಆ ಮೂಲಕ ಭಾರತದ ಪರ ಚುಟುಕು ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಈ ಹಿಂದೆ ಈ ಪಟ್ಟಿಯಲ್ಲಿ ಚಹಲ್ ಭುವನೇಶ್ವರ್ ಕುಮಾರ್ ರೊಂದಿಗೆ ಜಂಟಿ ಅಗ್ರ ಸ್ಥಾನದಲ್ಲಿದ್ದರು. ಆದರೆ ಇದೀಗ ಭುವಿಯನ್ನು 2ನೇ ಸ್ಥಾನಕ್ಕೆ ತಳ್ಳಿ ಅಗ್ರ ಸ್ಥಾನಕ್ಕೇರಿದ್ದಾರೆ. ಭುವಿ ಟಿ20ಯಲ್ಲಿ 90 ವಿಕೆಟ್ ಪಡೆದಿದ್ದು, 72 ವಿಕೆಟ್ ಪಡೆದಿರುವ ಆರ್ ಅಶ್ವಿನ್ ಮೂರನೇ ಸ್ಥಾನ, 70 ವಿಕೆಟ್ ಪಡೆದಿರುವ ಜಸ್ ಪ್ರೀತ್ ಬುಮ್ರಾ 4ನೇ ಸ್ಥಾನದಲ್ಲಿದ್ದಾರೆ.
Advertisement