ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌: ಲಬುಶೇನ್ ಹಿಂದಿಕ್ಕಿ ವಿಶ್ವದ ನಂ.1 ಸ್ಥಾನಕ್ಕೇರಿದ ಜೋ ರೂಟ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಅವರು ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ ಬ್ಯಾಟರ್...
ಜೋ ರೂಟ್
ಜೋ ರೂಟ್

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಅವರು ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ ಬ್ಯಾಟರ್ ಸ್ಥಾನಕ್ಕೇರಿದ್ದಾರೆ. ಭಾರತದ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಬೌಲರ್‌ಗಳಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ಎಜ್‌ಬಾಸ್ಟನ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್‌ ಮೊದಲ ಇನಿಂಗ್ಸ್‌ನಲ್ಲಿ ಅಜೇಯ ಶತಕ ಸಿಡಿಸಿ ಮಿಂಚಿದ್ದರು. ಇದೀಗ ಬರೋಬ್ಬರಿ 6 ತಿಂಗಳಿನಿಂದ ಟೆಸ್ಟ್ ಬ್ಯಾಟರ್‌ಗಳಲ್ಲಿ ನಂ.1 ಸ್ಥಾನದಲ್ಲಿ ಭದ್ರವಾಗಿದ್ದ ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ನಂ.1 ಸ್ಥಾನದಲ್ಲಿದ್ದ ಲಬುಶೇನ್ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಇದ್ದಾರೆ.

ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರು ಟಾಪ್ 10 ರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯರಾಗಿದ್ದಾರೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ರನ್ ಗಳಿಸಲು ವಿಫಲರಾದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ತೀವ್ರ ಕುಸಿತ ಕಂಡಿದ್ದು, ದ ಕೇವಲ 700 ರ‍್ಯಾಂಕಿಂಗ್ ಅಂಕಗಳೊಂದಿಗೆ 14ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com