ಮಹಿಳಾ ಐಪಿಎಲ್: ಆರ್ ಸಿಬಿಗೆ 224 ರನ್ ಗಳ ಬೃಹತ್ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್!

ಮಹಿಳಾ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 224ರನ್ ಗಳ ಬೃಹತ್ ಗುರಿ ನೀಡಿದೆ.
ಶೆಫಾಲಿ ವರ್ಮಾ ಮೆಗ್ ಲ್ಯಾನಿಂಗ್ ಬ್ಯಾಟಿಂಗ್
ಶೆಫಾಲಿ ವರ್ಮಾ ಮೆಗ್ ಲ್ಯಾನಿಂಗ್ ಬ್ಯಾಟಿಂಗ್
Updated on

ಮುಂಬೈ: ಮಹಿಳಾ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 224ರನ್ ಗಳ ಬೃಹತ್ ಗುರಿ ನೀಡಿದೆ.

ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗಧಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ ನಾಯಕಿ ಮೆಗ್ ಲ್ಯಾನಿಂಗ್ (72 ರನ್, 43 ಎಸೆತ) ಮತ್ತು ಶಫಾಲಿ ವರ್ಮಾ (84 ರನ್, 45 ಎಸೆತ) ಅಮೋಘ ಅರ್ಧಶತಕಗಳ ನೆರವಿನಿಂದ 223ರನ್ ಕಲೆ ಹಾಕಿತು.

ಆ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 224ರನ್ ಗಳ ಬೃಹತ್ ಗುರಿ ನೀಡಿದೆ. ಡೆಲ್ಲಿ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕಿ ಮೆಗ್ ಲ್ಯಾನಿಂಗ್ 43 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ 72 ರನ್ ಗಳಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಶಫಾಲಿ ವರ್ಮಾ ಕೇವಲ 45 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 10 ಬೌಂಡರಿಗಳ ನೆರವಿನಿಂದ 84 ರನ್ ಸಿಡಿಸಿದರು. ಬಳಿಕ ಕ್ರೀಸ್ ಗೆ ಬಂದ ಮರಿಝನ್ನೇ ಕಪ್ಪ್ 17 ಎಸೆತಗಳಲ್ಲಿ 39ರನ್ ಸಿಡಿಸಿದರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ 223 ರನ್ ಗಳಿಸಿ ಆರ್ ಸಿಬಿಗೆ 224ರನ್ ಗಳ ಬೃಹತ್ ಗುರಿ ನೀಡಿದೆ. ಆರ್ ಸಿಬಿ ಪರ ನೈಟ್ 2 ವಿಕೆಟ್ ಪಡೆದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com