ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯದ ಮೊದಲ ದಿನ ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡದ ಪರ ಆರಂಭಿಕ ಆಟಗಾರರಾದ ತ್ರಾವಿಸ್ ಹೆಡ್ 32 ರನ್ ಗಳಿಸಿದಾಗ ರವೀಂದ್ರ ಜಡೇಜಾ ಬೌಲಿಂಗ್ ನಲ್ಲಿ ಔಟ್ ಆದರು. ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಮರ್ನಾಸ್ ಲಾಬೂಸ್ ಚೆಂಗ್ ಕೇವಲ 3 ರನ್ ಗಳಿಸಿ ಔಟ್ ಆದರು.
ಭೋಜನ ವಿರಾಮದ ನಂತರ ಉಸ್ಮನ್ ಖಾವಾಜ ಮತ್ತು ಆಸಿಸ್ ನಾಯಕ ಸ್ಮೀವ್ ಸ್ಮೀತ್ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಜೂನ್ ನಲ್ಲಿ ಓವೆಲ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್ ದೃಷ್ಟಿಯಿಂದ ಈ ಟೆಸ್ಟ್ ಭಾರತಕ್ಕೆ ಮಹತ್ವದ್ದಾಗಿದ್ದು, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡಾ ಕೆಲಹೊತ್ತು ಪಂದ್ಯ ವೀಕ್ಷಿಸಿದ್ದಾರೆ.
Advertisement