ಐಪಿಎಲ್ ನಂತರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡುವುದು ಸವಾಲು: ರಾಹುಲ್ ದ್ರಾವಿಡ್

ಐಪಿಎಲ್ ಮುಗಿದ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಆಡುವುದು ದೊಡ್ಡ ಸವಾಲಾಗಿದೆ ಎಂದು ಟೀಂ ಇಂಡಿಯಾ  ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೋಮವಾರ ಹೇಳಿದ್ದಾರೆ.
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ಅಹಮದಾಬಾದ್: ಐಪಿಎಲ್ ಮುಗಿದ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಆಡುವುದು ದೊಡ್ಡ ಸವಾಲಾಗಿದೆ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೋಮವಾರ ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ನ್ಯೂಜಿಲೆಂಡ್ 2 ವಿಕೆಟ್‌ಗಳ ರೋಚಕ ಜಯ ಸಾಧಿಸುವುದರೊಂದಿಗೆ ಭಾರತ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶ ಪ್ರವೇಶಿಸಿದೆ. 

ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಮುಕ್ತಾಯವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್' ನಾವು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಗೆ ಅರ್ಹತೆ ಪಡೆದಿದ್ದೇವೆ. ಇದೊಂದು ಸವಾಲು ಆಗಿದೆ. ಐಪಿಎಲ್ ಮುಗಿದ ಒಂದು ವಾರದೊಳಗೆ ಆರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹೆಚ್ಚಿನ ಕಾರ್ಯತಂತ್ರ ಒಳಗೊಂಡಿರುತ್ತದೆ. ಅದರ ಬಗ್ಗೆ ನಾವು ಯೋಚಿಸುತ್ತೇವೆ ಎಂದರು. 

ನಾವು ಒತ್ತಡಕ್ಕೆ ಒಳಗಾದಾಗಲೆಲ್ಲಾ, ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಿದ್ದೇವೆ. ಯಾವಾಗಲೂ ಅದನ್ನು ನಾವು ಕಂಡುಕೊಂಡಿದ್ದೇವೆ. ಈ ತಂಡಕ್ಕೆ ತರಬೇತಿ ನೀಡುವುದು ಹೃದಯಸ್ಪರ್ಶಿ ವಿಷಯವಾಗಿದೆ ಎಂದು ದ್ರಾವಿಡ್ ಸ್ಟಾರ್ ಸ್ಪೋರ್ಟ್ಸ್‌ಗೆ ತಿಳಿಸಿದರು. ಐಪಿಎಲ್ ಜೂನ್ 1 ರಂದು ಮುಕ್ತಾಯವಾಗಲಿದ್ದು, ಜೂನ್ 7 ರಿಂದ 11 ರವರೆಗೆ ಲಂಡನ್‌ನ ಓವಲ್‌ನಲ್ಲಿ ಡಬ್ಲ್ಯುಟಿಸಿ ಫೈನಲ್ ಪಂದ್ಯ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com