3ನೇ ಏಕದಿನ: ಆಸ್ಚ್ರೇಲಿಯಾಗೆ 21 ರನ್ ಭರ್ಜರಿ ಜಯ, ಸರಣಿ ಸೋತ ಟೀಂ ಇಂಡಿಯಾ

ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 21 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಭಾರತಕ್ಕೆ ಸೋಲು
ಭಾರತಕ್ಕೆ ಸೋಲು
Updated on

ಚೆನ್ನೈ: ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 21 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 270 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ 49.1 ಓವರ್ ನಲ್ಲಿ 248 ರನ್ ಗಳಿಗೆ ಆಲೌಟ್ ಆಗುವ ಮೂಲಕ 21 ರನ್ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಸೋತಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.  ಬಳಿಕ ಗುರಿ ಬೆನ್ನಟ್ಟಿದ ಭಾರತ, ವಿರಾಟ್ ಕೊಹ್ಲಿ (54) ಅರ್ಧಶತಕದ ಹೊರತಾಗಿಯೂ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟ್ ಆಯಿತು. 72 ಎಸೆತಗಳನ್ನು ಎದುರಿಸಿದ ಕೊಹ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ ಆಲ್‌ರೌಂಡ್ ಪ್ರದರ್ಶನ ನೀಡಿದರೂ (40 ರನ್ ಹಾಗೂ 3 ವಿಕೆಟ್) ಯಾವುದೇ ಪ್ರಯೋಜನ ಆಗಲಿಲ್ಲ. ಶುಭಮನ್ ಗಿಲ್ 37, ಕೆ.ಎಲ್. ರಾಹುಲ್ 32, ನಾಯಕ ರೋಹಿತ್ ಶರ್ಮಾ 30 ರನ್ ಗಳಿಸಿದರು. ಸೂರ್ಯಕುಮಾರ್ ಕುಮಾರ್ ಸತತ ಮೂರನೇ ಸಲವೂ ಗೋಲ್ಡನ್ ಡಕ್ ಔಟ್ ಆದರು. 

ಆಸ್ಟ್ರೇಲಿಯಾದ ಪರ ಆ್ಯಡಂ ಜಾಂಪಾ ನಾಲ್ಕು ಹಾಗೂ ಅಶ್ಟನ್ ಅಗರ್ ಎರಡು ವಿಕೆಟ್ ಕಬಳಿಸಿದರು.  ಈ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ಯಾವುದೇ ಬ್ಯಾಟರ್ ಅರ್ಧಶತಕ ಗಳಿಸದ ಹೊರತಾಗಿಯೂ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಯಿತು. ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಟನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು. ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com