ಐಪಿಎಲ್ 2023: ಗುಜರಾತ್ ವಿರುದ್ಧದ ಪಂದ್ಯ, ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ  ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. 
ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ
ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ

ಜೈಪುರ:  ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ  ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. 

ರಾಜಸ್ಥಾನ ರಾಯಲ್ಸ್  ತಂಡದ ನಾಯಕ ಸಂಜು ಸ್ಯಾಮ್ಸನ್, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಸದ್ಯ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್  9 ಪಂದ್ಯಗಳನ್ನಾಡಿದ್ದು, 12 ಪಾಯಿಂಟ್ ಗಳೊಂದಿಗೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ  10 ಪಾಯಿಂಟ್ ಗಳೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ರಾಜಸ್ಥಾನ ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ಆರ್. ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.

ಗುಜರಾತ್ ಟೈಟಾನ್ಸ್ ತಂಡ ಇಂತಿದೆ: ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com