IPL 2023: ಸಾಲ್ಟ್ ಸ್ಫೋಟಕ ಬ್ಯಾಟಿಂಗ್; RCB ವಿರುದ್ಧ ಡೆಲ್ಲಿಗೆ 7 ವಿಕೆಟ್ ಗಳ ಜಯ

ಐಪಿಎಲ್ 2023ರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಐಪಿಎಲ್ 2023ರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ದೆಹಲಿ ಇನ್ನು 20 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 187 ರನ್ ಗಳಿಸುವ ಮೂಲಕ ಪಂದ್ಯ ಗೆದ್ದುಕೊಂಡಿತು.

ದೆಹಲಿ ಸ್ಫೋಟಕ ಆರಂಭ ಪಡೆದಿದ್ದು ತಂಡ 60 ರನ್ ಪೇರಿಸಿದ್ದಾಗ 22 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರನ್ನು ಹ್ಯಾಜಲ್‌ವುಡ್ ಔಟಾದರು. ಎರಡನೇ ವಿಕೆಟ್ ಆಗಿ ಮಿಚೆಲ್ ಮಾರ್ಷ್ 26 ರನ್ ಗಳಿಸಿದ್ದಾಗ ಔಟಾದರು. ನಂತರ ಮೈದಾನಕ್ಕಿಳಿದ ಫಿಲ್ ಸಾಲ್ಟ್ ಮತ್ತು ರಿಲೆ ರುಸ್ಸೋ 31 ಎಸೆತಗಳಲ್ಲಿ 52 ರನ್ ಜೊತೆಯಾಟ ನೀಡಿದರು.

ಫಿಲ್ ಸಾಲ್ಟ್ 87 ರನ್ ಗಳ ಇನಿಂಗ್ಸ್ ಆಡಿ ತಂಡದ ಗೆಲುವಿನ ಪ್ರಮುಖ ಪಾತ್ರವಹಿಸಿದರು. ರಿಲೆ ರುಸ್ಸೋ ಔಟಾಗದೆ 35 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ರನ್ ಗಳಿಸಿ ಅಜೇಯರಾಗಿ ಉಳಿದರು. ಹೇಜಲ್‌ವುಡ್, ಹರ್ಷಲ್ ಪಟೇಲ್ ಮತ್ತು ಕರ್ಣ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದ ಆರಂಭಿಕ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಆಕ್ರಮಣಕಾರಿ ಆರಂಭ ನೀಡಿದರು. 10 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 79 ರನ್ ಗಳಿಸಿತು. ಈ ವೇಳೆ ಕೊಹ್ಲಿ 7 ಸಾವಿರ ರನ್ ಪೂರೈಸಿದರು. ಫಾಫ್ ಡು ಪ್ಲೆಸಿಸ್ 45 ರನ್ ಗಳಿಸಿದರು. ಕೊಹ್ಲಿ 55 ರನ್ ಗಳಿಸಿ ಔಟಾದರು. ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ಔಟಾದರು.

ಲೊಮ್ರೊರ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಅವರು 29 ಎಸೆತಗಳಲ್ಲಿ ಅಜೇಯ 54 ರನ್ ಗಳಿಸಿದರು. ಕಾರ್ತಿಕ್ 11 ರನ್ ಗಳಿಸಿದರು. ಮಿಚೆಲ್ ಮಾರ್ಷ್ ಎರಡು ವಿಕೆಟ್ ಪಡೆದರು. ಮುಖೇಶ್ ಕುಮಾರ್ ಮತ್ತು ಖಲೀಲ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com