ಐಪಿಎಲ್ 2023: ಡೆಲ್ಲಿ ವಿರುದ್ಧ 77 ರನ್ ಗಳ ಗೆಲುವು, ಪ್ಲೇ‌‌ಆಫ್‌‌ಗೆ ಅರ್ಹತೆ ಪಡೆದ 2ನೇ ತಂಡ ಸಿಎಸ್ ಕೆ!

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್  ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು. 
ಸಿಎಸ್ ಕೆ ತಂಡದ ಆಟಗಾರರು
ಸಿಎಸ್ ಕೆ ತಂಡದ ಆಟಗಾರರು

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್  ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿದರು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 79, ಡೇವೊನ್ ಕಾನ್ವೇ 87 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ನಂತರ ಬಂದ ಶಿವಂ ದುಬೆ 22 ರನ್ ಗಳಿಸಿದರೆ ನಾಯಕ ಎಂಎಸ್ ಧೋನಿ ಅಜೇಯ 5, ರವೀಂದ್ರ ಜಡೇಜಾ ಅಜೇಯ 20 ರನ್ ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆ 224 ರನ್ ಗಳ ಗೆಲುವಿನ ಗುರಿ ನೀಡಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ  ಖಲೀಲ್ ಅಹ್ಮದ್, ಅನ್ರೀಚ್ ನಾರ್ಟೋಜ್, ಚೇತನ್ ಸಕಾರಿಯಾ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್  ಪರ ಪೃಥ್ವಿ ಶಾ 5 ರನ್ ಗಳಿಗೆ ಔಟಾದರೆ, ಡೇವಿಡ್ ವಾರ್ನರ್ 86, ಯಶ್ ದುಲ್ 13, ಅಕ್ಸರ್ ಪಟೇಲ್ 15 ರನ್ ಗಳಿಸಿದರು.

ಉಳಿದ ಯಾವುದೇ ಆಟಗಾರರು ಎರಡಂಕಿ ದಾಟುವಲ್ಲಿ ವಿಫಲರಾದರು. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 77 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ  ಪ್ಲೇಆಫ್‌ಗೆ ಅರ್ಹತೆ ಪಡೆಯಿತು. ಗುಜರಾತ್ ಟೈಟಾನ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com