ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸೆಮೀಸ್ ರೇಸ್, ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮೀಸ್ ರೇಸ್ ನಲ್ಲಿರುವ ನ್ಯೂಜಿಲೆಂಡ್ ತಂಡ ಇಂದು ಬೆಂಗಳೂರಿನಲ್ಲಿ ಶ್ರೀಲಂಕಾ ತಂಡ ಎದುರಿಸುತ್ತಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

ಬೆಂಗಳೂರು: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮೀಸ್ ರೇಸ್ ನಲ್ಲಿರುವ ನ್ಯೂಜಿಲೆಂಡ್ ತಂಡ ಇಂದು ಬೆಂಗಳೂರಿನಲ್ಲಿ ಶ್ರೀಲಂಕಾ ತಂಡ ಎದುರಿಸುತ್ತಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಮಹತ್ವದ ಪಂದ್ಯ ನಡೆಯುತ್ತಿದ್ದು, ಇಂದು ನ್ಯೂಜಿಲೆಂಡ್ ಗೆದ್ದರೆ ಬಹುತೇಕ ಸೆಮೀಸ್ ಹಾದಿ ಸುಗಮವಾಗಲಿದೆ. ಅಂತೆಯೇ ಈಗಾಗಲೇ ಸೆಮೀಸ್ ಹಾದಿಯಿಂದ ಔಟ್ ಆಗಿರುವ ಶ್ರೀಲಂಕಾ ತಂಡಕ್ಕೂ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಬಾಂಗ್ಲಾದೇಶದ ವಿರುದ್ಧ ಸೋತಿರುವ ಶ್ರೀಲಂಕಾ ತಂಡ ಇಂದಿನ ಪಂದ್ಯವನ್ನು ಗೆದ್ದು ಅಂತರವನ್ನು ಕಡಿಮೆ ಮಾಡಿಕೊಳ್ಳುವ ಉತ್ಸುಕದಲ್ಲಿದೆ. ಆದರೆ ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. ಸಂಜೆ ವೇಳೆ ನಗರದಲ್ಲಿ ಭಾರಿ ಮಳೆಯಾಗುವ ಶೇ.70ರಷ್ಟು ಸಾಧ್ಯತೆ ಇದೆ ಎಂದು ಹಮಾವಾನ ಇಲಾಖೆ ಹೇಳಿದೆ.

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಅಧಿಕೃತವಾಗಿ ಅರ್ಹತೆ ಪಡೆದಿದ್ದು, ಬಾಕಿ ಒಂದು ಸ್ಥಾನಕ್ಕೆ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನದ ನಡುವೆ ತೀವ್ರ ಪೈಪೋಟಿ ಏರ್ಪಿಟ್ಟಿದೆ. ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಶ್ರೀಲಂಕಾ ತಂಡವನ್ನು ಎದುರಿಸುತ್ತಿದೆ. ಆಡಿರುವ 8 ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದು 8 ಅಂಕಗಳನ್ನು ಸಂಪಾದಿಸಿದೆ. ಇಂದಿನ ಪಂದ್ಯ ಗೆದ್ದರೆ 10 ಅಂಕಗಳಾಗಲಿದ್ದು, ರನ್ ರೇಟ್ ಆಧಾರದ ಮೇಲೆ ಸೆಮೀಸ್ ಗೆ ಹಾದಿ ಸುಗಮವಾಗಲಿದೆ. ಆದರೆ ಮಳೆ ಬಂದು ಇಂದಿನ ಪಂದ್ಯ ರದ್ದಾದರೆ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಗೆ ತಲಾ ಒಂದೊಂದು ಅಂಕ ಹಂಚಿಕೆಯಾಗುತ್ತದೆ. 

ಪಾಕಿಸ್ತಾನಕ್ಕೆ ಅದೃಷ್ಟ
ಒಂದು ವೇಳೆ ಅಂಕ ಹಂಚಿಕೆಯಾದರೆ ನ್ಯೂಜಿಲೆಂಡ್  ಅಂಕಗಳಿಕೆ 9 ಆಗುತ್ತದೆ. ಆಗ ಪಾಕಿಸ್ತಾನಕ್ಕೆ ಸೆಮೀಸ್ ಹಾದಿ ಸುಗಮವಾಗಲಿದ್ದು, ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಗೆದ್ದರೆ ಆಗ ಆ ತಂಡದ ಅಂಕ 10 ಆಗುತ್ತದೆ. ಆಗ ಅಧಿಕೃತವಾಗಿ ಪಾಕಿಸ್ತಾನ ಸೆಮೀಸ್ ಗೆ ಸಾಗಲಿದೆ. ಅಂದಹಾಗೆ ಶನಿವಾರ ಇಂಗ್ಲೆಂಡ್ ತಂಡವನ್ನು ಪಾಕಿಸ್ತಾನ ಎದುರಿಸಲಿದೆ.

ತಂಡಗಳು ಇಂತಿವೆ
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಪೆರೆರಾ, ಕುಸಾಲ್ ಮೆಂಡಿಸ್(w/c), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚಮಿಕಾ ಕರುಣರತ್ನೆ, ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ಸಿ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಾಮ್ ಲ್ಯಾಥಮ್ (ಡಬ್ಲ್ಯೂ), ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com