ಸರ್ಕಾರದ ಹಸ್ತಕ್ಷೇಪ: ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಅಮಾನತುಗೊಳಿಸಿದ ಐಸಿಸಿ!

ಶ್ರೀಲಂಕಾ ಸರ್ಕಾರದ ಹಸ್ತಕ್ಷೇಪದಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಶುಕ್ರವಾರ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಐಸಿಸಿಯ ಈ ನಿರ್ಧಾರದಿಂದ ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾ...
ಐಸಿಸಿ (ಸಂಗ್ರಹ ಚಿತ್ರ)
ಐಸಿಸಿ (ಸಂಗ್ರಹ ಚಿತ್ರ)

ದುಬೈ: ಶ್ರೀಲಂಕಾ ಸರ್ಕಾರದ ಹಸ್ತಕ್ಷೇಪದಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಶುಕ್ರವಾರ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಐಸಿಸಿಯ ಈ ನಿರ್ಧಾರದಿಂದ ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾ ತಂಡ ಇನ್ನು ಮುಂದೆ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಾಧ್ಯವಾಗುವುದಿಲ್ಲ.

ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ತೋರಿದ ನಂತರ ಶ್ರೀಲಂಕಾ ಸರ್ಕಾರ, SLC ಅನ್ನು ವಜಾಗೊಳಿಸಿತ್ತು. ಲಂಕಾ ಸರ್ಕಾರದ ಈ ಹಸ್ತಕ್ಷೇಪ ಐಸಿಸಿ ನಿಯಮಗಳಿಗೆ ವಿರುದ್ಧವಾಗಿದ್ದು, ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ.

ಶ್ರೀಲಂಕಾ ವಿಶ್ವಕಪ್ ನಲ್ಲಿ ಒಂಬತ್ತು ಪಂದ್ಯಗಳಲ್ಲಿ ಏಳರಲ್ಲಿ ಸೋತಿತ್ತು.

"ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್‌ನ ಐಸಿಸಿ ಸದಸ್ಯತ್ವವನ್ನು ಅಮಾನತುಗೊಳಿಸಿದೆ" ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀಲಂಕಾ ಕ್ರಿಕೆಟ್ ಮಂಡಳಿಯು ತನ್ನ ವ್ಯವಹಾರಗಳಲ್ಲಿ ಶ್ರೀಲಂಕಾ ಸರ್ಕಾರದ ಹಸ್ತಕ್ಷೇಪವನ್ನು ತಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಲಂಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com