Ind vs Ned: ಎಬಿಡಿ, ಸಚಿನ್ ದಾಖಲೆ ಮುರಿದ ಹಿಟ್‌ಮ್ಯಾನ್ ರೋಹಿತ್!

ಭಾನುವಾರ ಇಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಲೀಗ್‌ನ ತನ್ನ ಅಂತಿಮ ಪಂದ್ಯದಲ್ಲಿ 25 ಓವರ್‌ಗಳ ನಂತರ 2 ವಿಕೆಟ್ ನಷ್ಟಕ್ಕೆ 178 ರನ್ ಗಳಿಸುವ ಮೂಲಕ ಭಾರತವು ಮತ್ತೊಮ್ಮೆ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಆರಂಭಿಕರಾಗಿ ಬಂದ ಶುಭಮನ್ ಗಿಲ್ ಅವರು ಕಡಿಮೆ ಎಸೆತಗಳಲ್ಲಿ ವೇಗದ ಅರ್ಧಶತಕ ಸಿಡಿಸಿದರು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ 2023ರ ಪಂದ್ಯದಲ್ಲಿ ಭಾರತದ ಬ್ಯಾಟರ್ ರೋಹಿತ್ ಶರ್ಮಾ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ 2023ರ ಪಂದ್ಯದಲ್ಲಿ ಭಾರತದ ಬ್ಯಾಟರ್ ರೋಹಿತ್ ಶರ್ಮಾ.
Updated on

ಬೆಂಗಳೂರು: ಭಾನುವಾರ ಇಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಲೀಗ್‌ನ ತನ್ನ ಅಂತಿಮ ಪಂದ್ಯದಲ್ಲಿ 25 ಓವರ್‌ಗಳ ನಂತರ 2 ವಿಕೆಟ್ ನಷ್ಟಕ್ಕೆ 178 ರನ್ ಗಳಿಸುವ ಮೂಲಕ ಭಾರತವು ಮತ್ತೊಮ್ಮೆ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಆರಂಭಿಕರಾಗಿ ಬಂದ ಶುಭಮನ್ ಗಿಲ್ ಅವರು ಕಡಿಮೆ ಎಸೆತಗಳಲ್ಲಿ ವೇಗದ ಅರ್ಧಶತಕ ಸಿಡಿಸಿದರು.

ಗಿಲ್ 32 ಎಸೆತಗಳಲ್ಲಿ 51 ರನ್ ಗಳಿಸಿದರು. ಪಾಲ್‌ ವ್ಯಾನ್‌ಮೀಕರನ್‌ ಅವರ ಎಸೆತದಲ್ಲಿ ತೇಜಾ ನಿಡಮನೂರು ಅವರಿಗೆ ವಿಕೆಟ್ ಒಪ್ಪಿಸಿದರು. ನಾಯಕ ರೋಹಿತ್ ಶರ್ಮಾ (54 ಎಸೆತಗಳಲ್ಲಿ 61) ಅವರೊಂದಿಗೆ 100 ರನ್‌ಗಳ ಜೊತೆಯಾಟವಾಡಿದರು.

ಪವರ್‌ಪ್ಲೇಯಲ್ಲಿ ಭಾರತ 90 ರನ್‌ಗಳ (91/0) ಗಡಿ ದಾಟಿದ್ದು ವಿಶ್ವಕಪ್ ಟೂರ್ನಿಯಲ್ಲಿ ಮೂರನೇ ಬಾರಿಗೆ.

ಮೊದಲ 15 ಓವರ್‌ಗಳಲ್ಲಿ ಎರಡು ಸಿಕ್ಸರ್‌ಗಳೊಂದಿಗೆ ರೋಹಿತ್ ಶರ್ಮಾ ಅವರು ಈ ವರ್ಷದಲ್ಲಿ ದಾಖಲೆಯ 60 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. 2015ರಲ್ಲಿ ಎಬಿ ಡಿವಿಲಿಯರ್ಸ್ ಅವರ 58ರ ದಾಖಲೆಯನ್ನು ಮುರಿದಿದ್ದಾರೆ.

ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಸತತ ಎರಡು ಏಕದಿನ ವಿಶ್ವಕಪ್‌ನಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಕೂಡ ರೋಹಿತ್ ಶರ್ಮಾ ಭಾಜನರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 1996 ಮತ್ತು 2003ರ ಏಕದಿನ ವಿಶ್ವಕಪ್‌ನಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ್ದರು.

ಒಂದು ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತ ತಂಡದ ನಾಯಕ ಎನ್ನುವ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com