ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್! ಅಭಿಮಾನಿಗಳು ಹೇಳಿದ್ದು ಹೀಗೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಶ್ರೇಯಸ್ಸಿಗೆ ಪಾತ್ರರಾದರು.
ಕೆಎಲ್ ರಾಹುಲ್
ಕೆಎಲ್ ರಾಹುಲ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಶ್ರೇಯಸ್ಸಿಗೆ ಪಾತ್ರರಾದರು.

ಹೌದು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್  ಗಳಿಸುವ ಮೂಲಕ ನೆದರ್ಲ್ಯಾಂಡ್ಸ್ ಗೆಲ್ಲಲು 411ರನ್ ಗಳ ಗುರಿ ನೀಡಿತು. ಈ ಬೃಹತ್ ಮೊಕೆತ್ತ ಪೇರಿಸುವಲ್ಲಿ ಕೆಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಪ್ರದರ್ಶನ ಪ್ರಮುಖ ಪಾತ್ರ ವಹಿಸಿತು.

 ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರೆ, ಕೆಎಲ್ ರಾಹುಲ್ 64 ಎಸೆತಗಳಲ್ಲಿ 102 ರನ್ ಗಳಿಸಿದರು. ಈ ಮೂಲಕ ಕೆಎಲ್ ರಾಹುಲ್ ಕೇವಲ 62 ಎಸೆತಗಳಲ್ಲಿ ಹೊಸ ಮೈಲಿಗಲ್ಲು ತಲುಪುವ ಮೂಲಕ ವಿಶ್ವಕಪ್ ಪಂದ್ಯದಲ್ಲಿ  ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡರು.

ಅಫ್ಘಾನಿಸ್ತಾನ ವಿರುದ್ಧ  63 ಎಸೆತಗಳಲ್ಲಿ ಶತಕ ಗಳಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು  ಮುರಿದರು.ಈ ಸಾಧನೆ ಮಾಡುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಕೆಎಲ್ ರಾಹುಲ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com