World Cup 2023: IND Vs NZ; ನ್ಯೂಜಿಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರು!

2023ರ ಏಕದಿನ ವಿಶ್ವಕಪ್‌ ಸರಣಿಯಲ್ಲಿ ಒಂಬತ್ತು ಪಂದ್ಯಗಳನ್ನು ಆಡಿ ಅಜೇಯವಾಗಿ ಉಳಿದಿರುವ ಭಾರತ ತಂಡವು ಬುಧವಾರ (ನವೆಂಬರ್ 15) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ.
ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ - ಶುಭಮನ್ ಗಿಲ್
ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ - ಶುಭಮನ್ ಗಿಲ್

ಮುಂಬೈ: 2023ರ ಏಕದಿನ ವಿಶ್ವಕಪ್‌ ಸರಣಿಯಲ್ಲಿ ಒಂಬತ್ತು ಪಂದ್ಯಗಳನ್ನು ಆಡಿ ಅಜೇಯವಾಗಿ ಉಳಿದಿರುವ ಭಾರತ ತಂಡವು ಬುಧವಾರ (ನವೆಂಬರ್ 15) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸದ್ಯ ನಡೆಯುತ್ತಿರುವ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಅದ್ಬುತ ಪ್ರದರ್ಶನವನ್ನು ನೀಡಿದೆ. ಲೀಗ್ ಹಂತದ ಕೊನೆಯ ಪಂದ್ಯವನ್ನು ಜಯಿಸುವ ಮೂಲಕ 18 ಅಂಕಗಳೊಂದಿಗೆ ಏಕದಿನ ವಿಶ್ವಕಪ್ 2023 ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಈ ವಿಶ್ವಕಪ್ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಮೂಲಕ ಭಾರತ ತನ್ನ ಗೆಲುವಿನ ಓಟವನ್ನು ಪ್ರಾರಂಭಿಸಿತು. ನಂತರ ಆತಿಥೇಯ ಅಫ್ಘಾನಿಸ್ತಾನ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ, ಬಾಂಗ್ಲಾದೇಶ, ನ್ಯೂಜಿಲೆಂಡ್, ಇಂಗ್ಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ ಮತ್ತು ನೆದರ್ಲೆಂಡ್ ವಿರುದ್ಧ ಭರ್ಜರಿ ಜಯ ಕಂಡಿದೆ. 

ಲೀಗ್ ಸುತ್ತಿನ ಕೊನೆಯ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 160 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. 

ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ಸ್ ಇವರೇ...

ಏಕದಿನ ಕ್ರಿಕೆಟ್ ಮಾದರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿರುವ 30 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅವರು ಅತಿ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿ 1,528 ರನ್ ಗಳಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಜೇಯ 154 ರನ್ ಗಳಿಸಿದ್ದು, ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ಗಳಿಸಿದ ಗರಿಷ್ಠ ರನ್ ಆಗಿದೆ. 

ಇನ್ನು ಕಿವೀಸ್ ವಿರುದ್ಧ 28 ಪಂದ್ಯಗಳನ್ನಾಡಿರುವ ನಾಯಕ ರೋಹಿತ್ ಶರ್ಮಾ ಅವರು 935 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಹಿಟ್‌ಮ್ಯಾನ್ ರೋಹಿತ್ ಕಲೆಹಾಕಿರುವ ಗರಿಷ್ಠ ಸ್ಕೋರ್ 147 ರನ್ ಆಗಿದೆ.

ಕೇನ್ ವಿಲಿಯಮ್ಸನ್ ನಾಯಕರಾಗಿರುವ ನ್ಯೂಜಿಲೆಂಡ್ ತಂಡದ ವಿರುದ್ಧ ಒಂಬತ್ತು ಪಂದ್ಯಗಳನ್ನು ಆಡಿರುವ ಯುವ ಆಟಗಾರ ಶುಭಮನ್ ಗಿಲ್ 510 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಕಿವೀಸ್ ವಿರುದ್ಧ ಗಿಲ್ ಅವರ ಅತ್ಯುತ್ತಮ ಸ್ಕೋರ್ 208 ರನ್ ಆಗಿದೆ.

ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ನ್ಯೂಜಿಲೆಂಡ್ ವಿರುದ್ಧ ಏಳು ಪಂದ್ಯಗಳನ್ನು ಆಡಿದ್ದು, 379 ರನ್ ಗಳಿಸಿದ್ದಾರೆ. ಶ್ರೇಯಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಅವರ ಅತ್ಯುತ್ತಮ ಸ್ಕೋರ್ 103 ರನ್ ಕಲೆಹಾಕಿರುವುದಾಗಿದೆ.

ಭಾರತದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ 13 ಪಂದ್ಯಗಳನ್ನು ಆಡಿದ್ದು, ಕಿವೀಸ್ ವಿರುದ್ಧದ ಏಕದಿನ ಕ್ರಿಕೆಟ್ ಮಾದರಿಯಲ್ಲಿ 361 ರನ್ ಗಳಿಸಿದ್ದಾರೆ. ಜಡೇಜಾ ಅವರ ಅತ್ಯುತ್ತಮ ಸ್ಕೋರ್ 77 ರನ್ ಆಗಿದೆ.

2023ರ ಏಕದಿನ ವಿಶ್ವಕಪ್‌ನ 21ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡವು ನಾಲ್ಕು ವಿಕೆಟ್‌ಗಳ ಜಯ ಸಾಧಿಸಿತು.

ಕಿವೀಸ್ ತಂಡದ ಡೆರಿಲ್ ಮಿಚೆಲ್ ಮತ್ತು ರಚಿನ್ ರವೀಂದ್ರ ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾಗೆ 274 ರನ್‌ಗಳ ಗುರಿಯನ್ನು ನೀಡಿದರು. ಇದೇ ವೇಳೆ ಭಾರತದ ವೇಗಿ ಮೊಹಮ್ಮದ್ ಶಮಿ ಐದು ವಿಕೆಟ್ ಕಿತ್ತರು. ನ್ಯೂಜಿಲೆಂಡ್ ವಿರುದ್ಧ ಕುಲದೀಪ್ ಯಾದವ್ ಕೂಡ ವಿಕೆಟ್ ಪಡೆದರು.

ಮತ್ತೊಂದೆಡೆ, ವಿರಾಟ್ ಕೊಹ್ಲಿ 95 ರನ್ ಗಳಿಸಿ ಭಾರತಕ್ಕೆ ಪಂದ್ಯಾವಳಿಯಲ್ಲಿ ಐದನೇ ಗೆಲುವು ಪಡೆಯಲು ನೆರವಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com