ICC World Cup 2023: IND vs NZ Semi-Final; ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

ನಾಲ್ಕು ವರ್ಷಗಳ ನಂತರ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡ
ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡ

ಮುಂಬೈ: ನಾಲ್ಕು ವರ್ಷಗಳ ನಂತರ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈ ವಿಶ್ವಕಪ್ ಆವೃತ್ತಿಯಲ್ಲಿ ಆಡಿರುವ ಎಲ್ಲಾ ಒಂಬತ್ತು ಪಂದ್ಯಗಳನ್ನು ಗೆದ್ದಿರುವ ಭಾರತವು ಅತ್ಯದ್ಭುತ ಫಾರ್ಮ್‌ನಲ್ಲಿದೆ. ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿಯೊಂದು ಪಂದ್ಯದಲ್ಲೂ ಒಬ್ಬೊಬ್ಬ ಆಟಗಾರರು ತಮ್ಮ ಟ್ಯಾಲೆಂಟ್ ಪ್ರದರ್ಶಿಸುತ್ತಿದ್ದಾರೆ. 

ಪಂದ್ಯಾವಳಿಯ ಮೊದಲಾರ್ಧದಲ್ಲಿ ನ್ಯೂಜಿಲೆಂಡ್ ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿತು. ಆದರೆ, ಐದನೇ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ನಾಲ್ಕು ವಿಕೆಟ್‌ಗಳ ಸೋಲನುಭವಿಸಿತು. ನ್ಯೂಜಿಲೆಂಡ್ ಆಡಿರುವ 9 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಆದಾಗ್ಯೂ, ಲೀಗ್ ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧದ ಅದ್ಭುತ ಜಯವು ಕಿವೀಸ್ ತಂಡಕ್ಕೆ ಸೆಮಿ-ಫೈನಲ್‌ ಪ್ರವೇಶಕ್ಕೆ ಸಹಾಯ ಮಾಡಿತು. 10 ಅಂಕಗಳ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. 

ವಾಂಖೆಡೆ ಸ್ಟೇಡಿಯಂನಲ್ಲಿ ಸಾಮಾನ್ಯವಾಗಿ ಬಹಳಷ್ಟು ರನ್‌ಗಳನ್ನು ನಿರೀಕ್ಷಿಸಬಹುದು. ಟೂರ್ನಿಯಲ್ಲಿ ಇದುವರೆಗೆ ಮುಂಬೈನಲ್ಲಿ ನಾಲ್ಕು ಪಂದ್ಯಗಳನ್ನು ಆಡಲಾಗಿದೆ. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ನಂತರ ಮೂರು ತಂಡಗಳು ಗೆದ್ದಿವೆ. ಚೇಸಿಂಗ್ ವೇಳೆ ಒಂದು ತಂಡ ಮಾತ್ರ ಜಯ ಸಾಧಿಸಿದೆ. ಈ ಪಂದ್ಯಾವಳಿಯಲ್ಲಿ ಈ ಸ್ಥಳದಲ್ಲಿ ಸರಾಸರಿ ಮೊದಲ ಇನಿಂಗ್ಸ್ ಸ್ಕೋರ್ 357 ಆಗಿದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಲು ಒಲವು ತೋರುತ್ತಾನೆ. ಏಕೆಂದರೆ, ಇಲ್ಲಿ ಬೃಹತ್ ಮೊತ್ತವನ್ನು ಬೆನ್ನಟ್ಟುವುದು ವಿಶೇಷವಾಗಿ ನಾಕೌಟ್ ಪಂದ್ಯದಲ್ಲಿ ಕಷ್ಟಕರವಾಗಿರುತ್ತದೆ.

ಟೀಂ ಇಂಡಿಯಾ ಆಡುವ 11ರ ಬಳಗ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೆರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com