ವಿಶ್ವಕಪ್ ಸೆಮಿಫೈನಲ್: ಕೊಹ್ಲಿ, ಅಯ್ಯರ್ ಶತಕ; ನ್ಯೂಜಿಲೆಂಡ್ ಗೆಲುವಿಗೆ 398 ರನ್ ಟಾರ್ಗೆಟ್ ನೀಡಿದ ಭಾರತ

 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಭರ್ಜರಿ ಶತಕಗಳ ನೆರವಿನಿಂದ ಭಾರತ, ನ್ಯೂಜಿಲೆಂಡ್ ಗೆಲುವಿಗೆ 398 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಮುಂಬೈ:  2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಭರ್ಜರಿ ಶತಕಗಳ ನೆರವಿನಿಂದ ಭಾರತ, ನ್ಯೂಜಿಲೆಂಡ್ ಗೆಲುವಿಗೆ 398 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ.

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಿಗದಿತ 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಬರೋಬ್ಬರಿ 398 ರನ್​ಗಳ ಟಾರ್ಗೆಟ್ ನೀಡಿದೆ.

ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ 47 ರನ್​ ಹಾಗೂ ಶುಭ್​ಮನ್ ಗಿಲ್ ಅಜೇಯ 80 ರನ್ ಬಾರಿಸಿದರು. ವಿರಾಟ್ ಕೊಹ್ಲಿ 117 ರನ್ ಹಾಗೂ ಶ್ರೇಯಸ್ ಅಯ್ಯರ್ 105 ರನ್​ ಗಳಿಸುವ ಮೂಲಕ ಇಬ್ಬರೂ ಶತಕದ ಜೊತೆಯಾಟವನ್ನು ಹಂಚಿಕೊಂಡರು.

ನ್ಯೂಜಿಲೆಂಡ್ ಪರ ಟಿಮ್ ಸೌಥಿ ಮೂರು ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್ ಏಕೈಕ ವಿಕೆಟ್ ಪಡೆದರು.

ಈ ವಿಶ್ವಕಪ್ ಆವೃತ್ತಿಯಲ್ಲಿ ಆಡಿರುವ ಎಲ್ಲಾ ಒಂಬತ್ತು ಪಂದ್ಯಗಳನ್ನು ಗೆದ್ದಿರುವ ಭಾರತವು ಅತ್ಯದ್ಭುತ ಫಾರ್ಮ್‌ನಲ್ಲಿದೆ. ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿಯೊಂದು ಪಂದ್ಯದಲ್ಲೂ ಒಬ್ಬೊಬ್ಬ ಆಟಗಾರರು ತಮ್ಮ ಟ್ಯಾಲೆಂಟ್ ಪ್ರದರ್ಶಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com