ICC Cricket World Cup 2023, 2ನೇ ಸೆಮಿ ಫೈನಲ್: ಆಸಿಸ್ ಗೆ ಗೆಲ್ಲಲು ದಕ್ಷಿಣ ಆಫ್ರಿಕಾ 213 ರನ್ ಸಾಧಾರಣ ಗುರಿ

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು ದಕ್ಷಿಣ ಆಫ್ರಿಕಾ ತಂಡ 213ರನ್ ಗಳ ಸಾಧಾರಣ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾದ ಪೆವಿಲಿಯನ್ ಪರೇಡ್
ದಕ್ಷಿಣ ಆಫ್ರಿಕಾದ ಪೆವಿಲಿಯನ್ ಪರೇಡ್

ಕೋಲ್ಕತಾ: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ (ICC Cricket World Cup 2023)ಯ 2ನೇ ಸೆಮಿ ಫೈನಲ್ (2nd Semi-Final) ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ (Australia) ತಂಡಕ್ಕೆ ಗೆಲ್ಲಲು ದಕ್ಷಿಣ ಆಫ್ರಿಕಾ (South Africa) ತಂಡ 213ರನ್ ಗಳ ಸಾಧಾರಣ ಗುರಿ ನೀಡಿದೆ.

ಕೋಲ್ಕತಾದ ಈಡನ್ ಗಾರ್ಡೆನ್ಸ್ (Eden Gardens) ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 49.4 ಓವರ್ ನಲ್ಲಿ 212 ರನ್ ಗಳಿಗೆ ಆಲೌಟ್ ಆಯಿತು.

ಇನ್ನಿಂಗ್ಸ್ ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ದಕ್ಷಿಣ ಆಫ್ರಿಕಾ ತಂಡ 212ರನ್ ಗಳಿಗೆ ಸರ್ವಪತನ ಕಂಡಿತು. ಆಫ್ರಿಕಾ ಪರ ಡೇವಿಡ್ ಮಿಲ್ಲರ್ (David Miller) ಶತಕ (101) ಮತ್ತು ಹೆನ್ರಿಚ್ ಕ್ಲಾಸನ್ (Heinrich Klaasen) (47) ಹೊರತು ಪಡಿಸಿದರೆ ಉಳಿದಾವ ಬ್ಯಾಟರ್ ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. 

ಆಸ್ಟ್ರೇಲಿಯಾದ ವೇಗಿಗಳ ಮಾರಕ ಬೌಲಿಂಗ್ ಗೆ ತತ್ತರಿಸಿದ ದಕ್ಷಿಣ ಆಫ್ರಿಕಾ 49.4 ಓವರ್ ನಲ್ಲಿ 212 ರನ್ ಗಳಿಗೆ ಆಲೌಟ್ ಆಯಿತು.  ಆಸ್ಟ್ರೇಲಿಯಾ ಪರ ಅನುಭವಿ ಮಿಚೆಲ್ ಸ್ಟಾರ್ಕ್ (Mitchell Starc), ನಾಯಕ ಪ್ಯಾಟ್ ಕಮಿನ್ಸ್ (Pat Cummins) ತಲಾ ಮೂರು ವಿಕೆಟ್ ಪಡೆದರೆ, ಜಾಶ್ ಹೇಜಲ್ವುಡ್ ಮತ್ತು ಟ್ರಾವಿಸ್ ಹೆಡ್ ತಲಾ 2 ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com