ಟ್ರಾವಿಸ್ ಹೆಡ್ ಶತಕ: ವಿಶ್ವಕಪ್ ಫೈನಲ್ ನಲ್ಲಿ ಭಾರತಕ್ಕೆ ಹೀನಾಯ ಸೋಲು, 6ನೇ ಬಾರಿಗೆ ಆಸಿಸ್ ಚಾಂಪಿಯನ್

ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.
6ನೇ ಬಾರಿಗೆ ಆಸಿಸ್ ಚಾಂಪಿಯನ್
6ನೇ ಬಾರಿಗೆ ಆಸಿಸ್ ಚಾಂಪಿಯನ್
Updated on

ಅಹ್ಮದಾಬಾದ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ನೀಡಿದ 241 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆಸ್ಚ್ರೇಲಿಯಾ ತಂಡ ಟ್ರಾವಿಸ್ ಹೆಡ್ ಶತಕ ಮತ್ತು ಲಬುಶೇನ್ ರ ಅರ್ಧಶತಕದ ನೆರವಿನಿಂದ ಗುರಿ ತಲುಪಿ ಜಯಭೇರಿ ಭಾರಿಸಿತು. ಆ ಮೂಲಕ 6ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.

ಕೇವಲ 47  ರನ್ ಗಳಿಗೆ ತನ್ನ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಆಸರೆಯಾಗಿ ನಿಂತರು. ಅವರಿಗೆ ಲಬುಶೇನ್ ಅತ್ಯುತ್ತಮ ಸಾಥ್ ನೀಡಿದರು. 120 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 15 ಬೌಂಡರಿ ನೆರವಿನಿಂದ ಹೆಡ್ 137 ರನ್ ಗಳಿಸಿ ಸಿರಾಜ್ ಬೌಲಿಂಗ್ ನಲ್ಲಿ ಅಂತಿಮ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಶಮಿ 1 ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com