ICC Cricket World Cup 2023: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ದಾಖಲೆ ಮುರಿದ ಕನ್ನಡಿಗ ಕೆಎಲ್ ರಾಹುಲ್

ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕೋಚ್ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಕೆಎಲ್ ರಾಹುಲ್
ಕೆಎಲ್ ರಾಹುಲ್
Updated on

ಅಹ್ಮದಾಬಾದ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕೋಚ್ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಏಕದಿನ ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಕೆ.ಎಲ್ ರಾಹುಲ್ (KL Rahul) ಪಾತ್ರರಾಗಿದ್ದಾರೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್​ನಲ್ಲಿ ಮಿಚೆಲ್ ಮಾರ್ಷ್ ಕ್ಯಾಚ್ ಪಡೆಯುವ ಮೂಲಕ ರಾಹುಲ್ 2023 ರ ವಿಶ್ವಕಪ್​ನಲ್ಲಿ ತಮ್ಮ 17ನೇ ಬಲಿಯನ್ನು ಪಡೆದುಕೊಂಡರು. ಆ ಮೂಲಕ ಅವರು ಹಾಲಿ ಕೋಚ್ ಹಾಗೂ ಭಾರತ ತಂಡದ ಮಾಜಿ ವಿಕೆಟ್​ ಕೀಪರ್​ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮುರಿದಿದ್ದಾರೆ.

2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್​ನಲ್ಲಿ ದ್ರಾವಿಡ್ 15 ಕ್ಯಾಚ್​ಗಳು ಹಾಗೂ 1 ಸ್ಟಂಪಿಂಗ್ ದಾಖಲೆಯನ್ನು ಮಾಡಿದ್ದರು. ಭಾನುವಾರ ನಡೆದ ಫೈನಲ್ ನಲ್ಲಿ ರಾಹುಲ್ 107 ಎಸೆತಗಳಲ್ಲಿ 66 ರನ್ ಗಳಿಸಿದರು. ಮೂರು ವಿಕೆಟ್ ನಷ್ಟಕ್ಕೆ 81 ರನ್​ ಗಳಿಸಿ ಅನಿಶ್ಚಿತತೆಯಲ್ಲಿದ್ದ ಭಾರತ ತಂಡಕ್ಕೆ ಚೇತರಿಸಿಕೊಳ್ಳಲು ಸಹಾಯ ಮಾಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com